ADVERTISEMENT

ರಾಮಮೂರ್ತಿ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯಸಭೆ ಸ್ಥಾನಕ್ಕೆ ಚುನಾವಣೆ ಪ್ರಕಟ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2019, 8:02 IST
Last Updated 25 ನವೆಂಬರ್ 2019, 8:02 IST
   

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ಆಯ್ಕೆಯಾಗಿದ್ದ ಕೆ.ಸಿ ರಾಮುಮೂರ್ತಿ ಅವರ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯಸಭೆ ಸ್ಥಾನಕ್ಕೆ ಚುನಾವಣಾ ಅಧಿಸೂಚನೆ ಪ್ರಕಟವಾಗಿದೆ.

ಸೋಮವಾರ (ನ.25) ಚುನಾವಣೆ ಅಧಿಸೂಚನೆ ಪ್ರಕಟವಾಗಿದ್ದು, ಡಿ.2 ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ. ಡಿ. 3 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ಉಮೇದುವಾರಿಕೆ ಹಿಂಪಡೆಯಲು ಡಿ. 5 ಕೊನೇ ದಿನ. ಡಿ. 12ರಂದು ಬೆಳಗ್ಗೆ 9 ರಿಂದ ಸಂಜೆ 4 ರ ವರೆಗೆ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.

ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ಮಾಜಿ ಪೊಲೀಸ್‌ ಅಧಿಕಾರಿ ಕೆ.ಸಿ ರಾಮಮೂರ್ತಿ ಅವರು ಕಳೆದ ತಿಂಗಳು ತಮ್ಮ ಸ್ಥಾನಕ್ಕೆರಾಜೀನಾಮೆ ನೀಡಿದ್ದರು. ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದರು. ನಂತರ ಬಿಜೆಪಿ ಸೇದ್ದರು. ಸದ್ಯ ಈಗ ಎದುರಾಗಿರುವ ಚುನಾವಣೆಯಲ್ಲಿ ಅವರು ಬಿಜೆಪಿಯಿಂದಲೇ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.