ADVERTISEMENT

ದುರಸ್ತಿಯಾಗದ ರಸ್ತೆ: ನವಿಲೆಮನೆ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2020, 19:57 IST
Last Updated 18 ಡಿಸೆಂಬರ್ 2020, 19:57 IST
ಸಾಗರ ತಾಲ್ಲೂಕಿನ ಸಿರಿವಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಿಲೆಮನೆ ಗ್ರಾಮದ ಸಂಪರ್ಕ ರಸ್ತೆ.
ಸಾಗರ ತಾಲ್ಲೂಕಿನ ಸಿರಿವಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಿಲೆಮನೆ ಗ್ರಾಮದ ಸಂಪರ್ಕ ರಸ್ತೆ.   

ಸಾಗರ: ತಮ್ಮ ಗ್ರಾಮಕ್ಕೆ ಸಂಪರ್ಕ ರಸ್ತೆ ದುರಸ್ತಿಯಾಗದ ಹಾಗೂ ಸೇತುವೆ ನಿರ್ಮಾಣವಾಗದ ಕಾರಣ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಲು ತಾಲ್ಲೂಕಿನ ಸಿರಿವಂತೆ ಪಂಚಾಯಿತಿ ವ್ಯಾಪ್ತಿಯ ನವಿಲೆಮನೆ ಗ್ರಾಮಸ್ಥರು ತೀರ್ಮಾನಿಸಿದ್ದಾರೆ.

2018ನೇ ಸಾಲಿನಲ್ಲೇ ಸುಂಕದೇವರಕೊಪ್ಪದ ತಿರುವಿನಿಂದ ನವಿಲೆಮನೆ ಸಂಪರ್ಕ ರಸ್ತೆ ನಿರ್ಮಾಣಕ್ಕೆ ₹ 12.50 ಲಕ್ಷ ವೆಚ್ಚದಲ್ಲಿ ಅಂದಾಜು ಪಟ್ಟಿ ತಯಾರಿಸಲಾಗಿತ್ತು. ಆದರೆ, ಈವರೆಗೂ ರಸ್ತೆ ನಿರ್ಮಾಣವಾಗಿಲ್ಲ. ರಸ್ತೆ ಹಾಗೂ ಸೇತುವೆ ನಿರ್ಮಿಸುವಂತೆ ಹಲವು ಬಾರಿ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಮನವಿ ನೀಡಿದ್ದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ರಸ್ತೆ, ಸೇತುವೆ ಆಗುವವರೆಗೂ ಮತದಾನ ಬಹಿಷ್ಕಾರ ಮಾಡಿದ್ದೇವೆ ಎಂದು ಗ್ರಾಮದಲ್ಲಿ ಫಲಕ ಹಾಕಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.