ADVERTISEMENT

ಜಾಧವ್‌ ರಾಜೀನಾಮೆಯಿಂದ ತೆರವಾಗಿದ್ದ ಚಿಂಚೋಳಿಗೆ ಮೇ 19ರಂದು ಉಪ ಚುನಾವಣೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2019, 14:45 IST
Last Updated 16 ಏಪ್ರಿಲ್ 2019, 14:45 IST
   

ನವದೆಹಲಿ: ಶಾಸಕ ಉಮೇಶ ಜಾಧವ್‌ ಅವರ ರಾಜೀನಾಮೆಯಿಂದಾಗಿ ತೆರವಾಗಿರುವ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಮೇ 19ರಂದು ನಿಗದಿಯಾಗಿದೆ.

ಏಪ್ರಿಲ್‌ 22ರಂದು ಈ ಉಪ ಚುನಾವಣೆಯ ಅಧಿಸೂಚನೆ ಜಾರಿಯಾಗಲಿದೆ. ನಾಮಪತ್ರ ಸಲ್ಲಿಸಲು ಏಪ್ರಿಲ್‌ 29 ಕೊನೆಯ ದಿನವಾಗಿದ್ದು, ಏಪ್ರಿಲ್‌ 30ರಂದು ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂದೆ ಪಡೆಯಲು ಮೇ 2 ಕೊನೆಯ ದಿನ. ಮೇ 23ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್‌ ಶಾಸಕರಾಗಿದ್ದ ಉಮೇಶ ಜಾಧವ್‌ ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಉದ್ದೇಶದಿಂದ ರಾಜೀನಾಮೆ ಸಲ್ಲಿಸಿದ್ದರು. ಸ್ಪೀಕರ್‌ ರಮೇಶಕುಮಾರ್‌ ಅವರು ರಾಜೀನಾಮೆಯನ್ನು ಏಪ್ರಿಲ್‌ 1ರಂದು ಅಂಗೀಕರಿಸಿದ್ದರು.

ADVERTISEMENT

ಸಚಿವ ಸಿ.ಎಸ್‌. ಶಿವಳ್ಳಿ ಅವರ ನಿಧನದಿಂದ ತೆರವಾಗಿರುವ ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯೂ ಮೇ 19ಕ್ಕೆ ನಿಗದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.