ADVERTISEMENT

ಉಪಚುನಾವಣೆ| ನಾಳೆಯಿಂದ ನೀತಿ ಸಂಹಿತೆ ಜಾರಿ: ಆಯಾ ಕ್ಷೇತ್ರಗಳಿಗೆ ಸೀಮಿತ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2019, 7:51 IST
Last Updated 10 ನವೆಂಬರ್ 2019, 7:51 IST
ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ (ಸಂಗ್ರಹ ಚಿತ್ರ)
ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ (ಸಂಗ್ರಹ ಚಿತ್ರ)   

ಬೆಂಗಳೂರು:ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ನೀತಿ ಸಂಹಿತೆ ಸೋಮವಾರದಿಂದ ಜಾರಿಗೆ ಬರಲಿದೆ. ಇಡೀ ಜಿಲ್ಲೆಯ ಬದಲಿಗೆ ಚುನಾವಣೆ ನಡೆಯುವ ಕ್ಷೇತ್ರಕ್ಕೆ ಸೀಮಿತವಾಗಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದುರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ ತಿಳಿಸಿದರು.

ಭಾನುವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ‘ನೀತಿ ಸಂಹಿತೆ ಇಡೀ ಜಿಲ್ಲೆಗೆ ಅನ್ವಯಿಸಿದರೆ ಅಭಿವೃದ್ಧಿ ಕೆಲಸಗಳಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಈ ಮಾರ್ಪಾಡು ಮಾಡಲಾಗಿದೆ’ ಎಂದರು.

ಈ ಬಾರಿ ‘ಎಂ 3’ ವಿದ್ಯುನ್ಮಾನ ಮತಯಂತ್ರಗಳನ್ನು ಬಳಸಲಾಗುತ್ತದೆ. 2018ರಲ್ಲಿ ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಇದನ್ನು ಮೊದಲ ಬಾರಿಗೆ ಬಳಸಲಾಗಿತ್ತು. ಇವು ಸುಧಾರಿತ ಮತಯಂತ್ರಗಳು ಎಂದು ಅವರು ಮಾಹಿತಿ ನೀಡಿದರು.

ADVERTISEMENT

ಈಗಾಗಲೇ 29 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಇದು ಮಾನ್ಯವಾಗಿರುತ್ತದೆ. ಇದೇ 18ರವರೆಗೆ ನಾಮ ಪತ್ರ ಸಲ್ಲಿಕೆಗೆ ಅವಕಾಶ ಇದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.