ADVERTISEMENT

ಕೆಕೆಆರ್‌ಡಿಬಿ ಅಧ್ಯಕ್ಷರ ವಿರುದ್ಧ ಕ್ರಮಕ್ಕೆ ಆಯೋಗ ಸೂಚನೆ

₹1 ಕೋಟಿ ವಿಶೇಷ ಅನುದಾನದ ಘೋಷಣೆ ವಿರುದ್ಧ ಕಾಂಗ್ರೆಸ್‌ ದೂರು

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2020, 21:44 IST
Last Updated 17 ಡಿಸೆಂಬರ್ 2020, 21:44 IST
ದತ್ತಾತ್ರೇಯ ಪಾಟೀಲ
ದತ್ತಾತ್ರೇಯ ಪಾಟೀಲ   

ಕಲಬುರ್ಗಿ: ಸದಸ್ಯರನ್ನು ಅವಿರೋಧವಾಗಿ ಆಯ್ಕೆಮಾಡುವ ಗ್ರಾಮ ಪಂಚಾಯಿತಿಗಳಿಗೆ ಅಭಿವೃದ್ಧಿಗಾಗಿ ₹1 ಕೋಟಿ ವಿಶೇಷ ಅನುದಾನವನ್ನು ಮಂಡಳಿಯಿಂದ ನೀಡಲಾಗುವುದು ಎಂದು ಘೋಷಣೆ ಮಾಡಿದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗ ಕಲಬುರ್ಗಿ ಜಿಲ್ಲಾಧಿಕಾರಿಗೆ ಸೂಚನೆ ನೀಡಿದೆ.

‘ಗ್ರಾ.ಪಂ. ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷರು ₹1 ಕೋಟಿ ವಿಶೇಷ ಅನುದಾನದ ಘೋಷಣೆ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಗದೇವ ಗುತ್ತೇದಾರ, ಕಾಂಗ್ರೆಸ್‌ ಮುಖಂಡ ಅಲ್ಲಮಪ್ರಭು ಪಾಟೀಲ ಅವರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಆ ದೂರಿನ ಪ್ರತಿ ಹಾಗೂ ದಾಖಲೆಗಳನ್ನು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರಿಗೆ ರವಾನಿಸಿರುವ ಆಯೋಗವು, ಕಾನೂನಿನಡಿ ಅಗತ್ಯ ಕ್ರಮ ಕೈಗೊಂಡು ವರದಿ ನೀಡಬೇಕು ಎಂದು ಸೂಚಿಸಿದೆ.

ಈ ಕುರಿತು ಪ್ರತಿಕ್ರಿಯೆ ಪಡೆಯಲು ಜಿಲ್ಲಾಧಿಕಾರಿ ಜ್ಯೋತ್ಸ್ನಾ ಅವರನ್ನು ಸಂಪರ್ಕಿಸಿದಾಗ ಅವರು ಪ್ರತಿಕ್ರಿಯೆಗೆ ಲಭ್ಯರಾಗಲಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.