ADVERTISEMENT

ಮತದಾರರ ಗುರುತಿನ ಚೀಟಿಗೆ ಆಧಾರ್‌ ಜೋಡಣೆ ಕಡ್ಡಾಯವಲ್ಲ: ಚುನಾವಣಾ ಆಯೋಗ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2022, 21:04 IST
Last Updated 22 ಆಗಸ್ಟ್ 2022, 21:04 IST
   

ಬೆಂಗಳೂರು: ಮತದಾರರ ಗುರುತಿನ ಚೀಟಿಗೆ ಆಧಾರ್‌ ಸಂಖ್ಯೆಯನ್ನು ಜೋಡಿಸುವುದು ಕಡ್ಡಾಯವಲ್ಲ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್‌ ಸಂಖ್ಯೆ ಜೋಡಣೆ ಕಡ್ಡಾಯವಲ್ಲ. ಮತದಾರರು ಸ್ವಯಂಪ್ರೇರಿತರಾಗಿ ಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್‌ ಸಂಖ್ಯೆಯನ್ನು ಬಳಸಿ ಅಥವಾ
ಇತರೆ ನಿಗದಿತ ದಾಖಲೆಗಳ ಮೂಲಕವೂ ಗುರುತಿಸಿ, ದೃಢೀಕರಿಸಿ ಜೋಡಣೆ ಮಾಡಬಹುದಾಗಿದೆ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT