ADVERTISEMENT

ಪರಿಷತ್‌ನ ನಾಲ್ಕು ಸ್ಥಾನಗಳ ಚುನಾವಣೆಗೆ ದಿನಾಂಕ ಘೋಷಣೆ: ಜೂನ್‌ 15ಕ್ಕೆ ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 12 ಮೇ 2022, 8:23 IST
Last Updated 12 ಮೇ 2022, 8:23 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ರಾಜ್ಯ ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳ ಚುನಾವಣೆಗೆ ವೇಳಾಪಟ್ಟಿಪ್ರಕಟಗೊಂಡಿದೆ.

ಎರಡು ಪದವೀಧರ ಕ್ಷೇತ್ರಗಳು ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಂದ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಜೂನ್‌ 13ರಂದು ಮತದಾನ ನಡೆಯಲಿದ್ದು, ಜೂನ್‌ 15ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗವು ಗುರುವಾರ ತಿಳಿಸಿದೆ.

ADVERTISEMENT

ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಕೆ.ಟಿ ಶ್ರೀಕಂಠೇಗೌಡ, ಹನುಮಂತ ನಿರಾಣಿ, ಅರುಣ್‌ ಶಹಪುರ ಅವರ ಸದಸ್ಯತ್ವಜುಲೈ 4ಕ್ಕೆ ಅಂತ್ಯಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.