ಸಿದ್ದರಾಮಯ್ಯ
ಬೆಂಗಳೂರು: ಬಿಹಾರದಲ್ಲೂ ಮತಕಳವು ನಡೆದಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಶುಕ್ರವಾರ) ಆರೋಪಿಸಿದ್ದಾರೆ.
ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದು, ಎನ್‌ಡಿಎ ಮೈತ್ರಿಯು ಅಭೂತಪೂರ್ವ ಗೆಲುವಿನತ್ತ ದಾಪುಗಾಲು ಇಟ್ಟಿದೆ. ಮತ್ತೊಂದೆಡೆ ಮಹಾಘಟಬಂಧನ ಮೈತ್ರಿಕೂಟವು ಕಳಪೆ ಸಾಧನೆ ಮಾಡಿದೆ.
ಬಿಹಾರದಲ್ಲಿ ಕಾಂಗ್ರೆಸ್-ಆರ್‌ಜೆಡಿ ಮೈತ್ರಿಗೆ ಹಿನ್ನಡೆಯಾಗಿದೆ. ಈ ಕುರಿತು ಕೇಳಿದಾಗ, 'ನನಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ದೊರಕಿಲ್ಲ' ಎಂದಷ್ಟೇ ಪ್ರತಿಕ್ರಿಯಿಸಿದ್ದಾರೆ.
'ಜನಾದೇಶವನ್ನು ನಾವು ಒಪ್ಪಿಕೊಳ್ಳಬೇಕು. ಈ ಹಿನ್ನಡೆಗೆ ಕಾರಣ ಏನು ಎಂದು ಗೊತ್ತಿಲ್ಲ. ನಾನು ಬಿಹಾರಕ್ಕೆ ಹೋಗಿಲ್ಲ. ಎನ್‌ಡಿಎಗೆ ಭಾರಿ ಬಹುಮತ ದೊರಕಿರುವುದಕ್ಕೆ ಕಾರಣ ಗೊತ್ತಿಲ್ಲ. ಈ ಕುರಿತು ಮಾಹಿತಿ ಪಡೆಯಲು ಯತ್ನಿಸುತ್ತೇನೆ' ಎಂದು ಹೇಳಿದ್ದಾರೆ.
ಬಿಹಾರದಲ್ಲಿ ಚುನಾವಣೆಗೂ ಮುನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮತಕಳವು ಆರೋಪದ ಬಗ್ಗೆ ಪ್ರಶ್ನಿಸಿದಾಗ, 'ಬಿಹಾರದಲ್ಲೂ ಮತ ಕಳ್ಳತನ ನಡೆದಿದೆ' ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.