ರಿಟ್ ಅರ್ಜಿ
ಬೆಂಗಳೂರು: ‘ಚುನಾವಣೆಯಲ್ಲಿ ನಾಮಪತ್ರ ತಿರಸ್ಕರಿಸಿರುವ ಚುನಾವಣಾ ಆಯೋಗದ ಕ್ರಮವನ್ನು ರಿಟ್ ಅರ್ಜಿ ಮೂಲಕ ಪ್ರಶ್ನಿಸಲು ಆಗದು. ಏನಿದ್ದರೂ, ಚುನಾವಣಾ ತಕರಾರು ಅರ್ಜಿ ಸಲ್ಲಿಕೆ ಮಾತ್ರದಿಂದಲೇ ಪರಿಹಾರ ಪಡೆಯಲು ಸಾಧ್ಯ’ ಎಂದು ಹೈಕೋರ್ಟ್ ಆದೇಶಿಸಿದೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಅತಿಥಿ ಉಪನ್ಯಾಸಕ ವಿ.ಎಸ್.ಮಂಜುನಾಥ್ ನಾಮಪತ್ರವನ್ನು ಕೆಲವು ಲೋಪದೋಷಗಳ ಕಾರಣ ಚುನಾವಣಾ ಆಯೋಗ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಮಂಜುನಾಥ್ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಚುನಾವಣಾ ಸಮಯದಲ್ಲಿ ಯಾವುದೇ ಆಧಾರದಲ್ಲಿ ನಾಮಪತ್ರ ತಿರಸ್ಕಾರವಾದರೂ ಚುನಾವಣೆ ಪ್ರಕ್ರಿಯೆಯ ಮಧ್ಯದ ಅವಧಿಯಲ್ಲಿ ಅಂತಹ ಅರ್ಜಿಗಳನ್ನು ನ್ಯಾಯಾಲಯ ಮಾನ್ಯ ಮಾಡಲಾಗದು. ಬೇಕಿದ್ದರೆ ಅರ್ಜಿದಾರರು ಚುನಾವಣೆಯ ನಂತರ ಚುನಾವಣಾ ತಕರಾರು ಅರ್ಜಿ ಸಲ್ಲಿಸಿ ಕಾನೂನು ಪ್ರಕಾರ ಪರಿಹಾರ ಪಡೆದುಕೊಳ್ಳಬಹುದಾಗಿದೆ’ ಎಂದು ಆದೇಶಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.