ADVERTISEMENT

ಸಹಕಾರ ಸಂಘಗಳಿಗೆ ಡಿಸೆಂಬರ್‌ ಬಳಿಕ ಚುನಾವಣೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2021, 17:04 IST
Last Updated 19 ಜುಲೈ 2021, 17:04 IST

ಬೆಂಗಳೂರು: ಸಹಕಾರ ಸಂಘಗಳ ಕಾಯ್ದೆಯಡಿ ನೋಂದಣಿಯಾಗಿರುವ ಸಹಕಾರ ಸಂಘಗಳು, ಸೊಸೈಟಿಗಳು ಮತ್ತು ಸಂಘ, ಸಂಸ್ಥೆಗಳ ಸಾರ್ವತ್ರಿಕ ಚುನಾವಣೆಯನ್ನು ಡಿಸೆಂಬರ್‌ ಅಂತ್ಯದವರೆಗೂ ಮುಂದೂಡಲು ನಿರ್ಧರಿಸಲಾಗಿದೆ.

ಅವಧಿ ಮುಗಿದಿರುವ ಸಹಕಾರ ಸಂಘಗಳು ಮತ್ತು ಸಂಸ್ಥೆಗಳ ಚುನಾವಣೆ ಯನ್ನು ಆರು ತಿಂಗಳ ಅವಧಿಗೆ ಮುಂದೂಡಿ ಏ. 26ರಂದು ಆದೇಶ ಹೊರಡಿಸಲಾಗಿತ್ತು. ಅದನ್ನು ಮತ್ತಷ್ಟು ಕಾಲ ವಿಸ್ತರಿಸಿ, 2022ರಲ್ಲೇ ಚುನಾವಣೆ ನಡೆಸಲು ಇದೇ 15ರಂದು ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು.

ಸಂಪುಟ ಸಭೆಯ ನಿರ್ಧಾರದಂತೆ ಡಿಸೆಂಬರ್‌ ಅಂತ್ಯದವರೆಗೂ ಸಹಕಾರ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ ಮುಂದೂಡಿ ಆದೇಶ ಹೊರಡಿಸುವಂತೆ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಹಕಾರ ಚುನಾವಣಾ ಪ್ರಾಧಿಕಾರದ ಆಯುಕ್ತರಿಗೆ ಇದೇ 17ರಂದು ಪತ್ರ ಬರೆದಿದ್ದಾರೆ.

ADVERTISEMENT

ಪದಾಧಿಕಾರಿಗಳ ಚುನಾವಣೆಗೆ ಒಪ್ಪಿಗೆ: ಸಹಕಾರ ಸಂಘಗಳು ಮತ್ತು ಸಂಸ್ಥೆಗಳ ನಿರ್ದೇಶಕರ ಆಯ್ಕೆಗೆ ಚುನಾವಣೆ ನಡೆದಿದ್ದು, ‍ಪದಾಧಿಕಾರಿಗಳ ಆಯ್ಕೆ ಬಾಕಿ ಇರುವ ಪ್ರಕರಣಗಳಲ್ಲಿ ಮುಂದಿನ ಪ್ರಕ್ರಿಯೆ ನಡೆಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.