ಮತದಾರ
ಬೆಂಗಳೂರು: ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಇದೇ 16ರಂದು ಉಪ ಚುನಾವಣೆ ನಡೆಯಲಿದ್ದು, ಈ ಕ್ಷೇತ್ರ ವ್ಯಾಪ್ತಿಯ ಅರ್ಹ ಶಿಕ್ಷಕ ಮತದಾರರಿಗೆ ಅಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ, ರಾಮನಗರ ಜಿಲ್ಲೆ ಮತ ಕ್ಷೇತ್ರದ ವ್ಯಾಪ್ತಿಯಲ್ಲಿದೆ. ಇಲ್ಲಿನ ಸರ್ಕಾರಿ, ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಅರ್ಹ ಮತದಾರರಿಗೆ ಈ ಆದೇಶ ಅನ್ವಯವಾಗಲಿದೆ. ಉಪ ಚುನಾವಣೆಯಲ್ಲಿ ಮತದಾನದಲ್ಲಿ ಭಾಗವಹಿಸಲು ಪೂರ್ವಾನುಮತಿ ಪಡೆಯಬೇಕೆಂಬ ಷರತ್ತಿಗೆ ಒಳಪಟ್ಟು ಈ ರಜೆ ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.