ಬೆಂಗಳೂರು: ಏಪ್ರಿಲ್ 23 ಮತ್ತು 24ರಂದು ಸಿಇಟಿ ಪರೀಕ್ಷೆ ನಡೆಯಲಿದ್ದು, ಏ.23 ರಂದು ಎರಡನೇ ಹಂತದ ಮತದಾನ ಇರುವುದರಿಂದ ಮೊದಲ ಬಾರಿ ಮತದಾನದ ಹಕ್ಕು ಪಡೆದಿರುವ ಸಾಕಷ್ಟು ಯುವ ಮತದಾರರಿಗೆ ಮತದಾನ ಮಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ.
ಅಲ್ಲದೆ, ಪರೀಕ್ಷೆಗೆ ಹಾಜರಾಗುವ ಯುವ ಮತದಾರರ ಪೋಷಕರಿಗೂ ಮತ ಚಲಾಯಿಸುವುದೂ ಕಷ್ಟವಾಗಲಿದೆ. ಲಕ್ಷಾಂತರ ಯುವಕ-ಯುವತಿಯರು ಪರೀಕ್ಷೆಗೆ ಹಾಜರಾಗಲಿದ್ದಾರೆ. 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.
ಪರೀಕ್ಷೆ ದಿನದಂತೆ ಚುನಾವಣೆ ಇರುವ ಕುರಿತು ಪ್ರತಿಕ್ರಿಯಿಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ‘ಈ ಬಗ್ಗೆ ಶಿಕ್ಷಣ ಇಲಾಖೆ ಜತೆ ಚರ್ಚಿಸಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.