ಬೆಂಗಳೂರು: ಚುನಾವಣಾ ಬಾಂಡ್ ಭಾರತದ ಇತಿಹಾಸದಲ್ಲೇ ಅತಿ ದೊಡ್ಡ ಹಗರಣವಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಚುನಾವಣಾ ಆಯೋಗವು ಸಾರ್ವಜನಿಕಗೊಳಿಸಿದ ಮರುದಿನವೇ ಕಾಂಗ್ರೆಸ್‌ನಿಂದ ಈ ಹೇಳಿಕೆ ಹೊರಬಿದ್ದಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಬರೆದುಕೊಂಡಿದೆ.
‘ಚುನಾವಣಾ ಬಾಂಡ್’ ಎನ್ನುವುದು ಕೇಂದ್ರ ಸರ್ಕಾರದ ಕಿಕ್ ಬ್ಯಾಕ್ ಹಗರಣದ ಹೊಸ ಹೆಸರು ಎಂದು ಕಾಂಗ್ರೆಸ್ ಹೇಳಿದೆ.
‘ನಾ ಖಾವುಂಗಾ, ನಾ ಖಾನೆದುಂಗಾ‘ ಎನ್ನುವ ನರೇಂದ್ರ ಮೋದಿ ಅವರೇ, ಚುನಾವಣಾ ಬಾಂಡ್ ನಲ್ಲಿ ತಿಂದವರು ಯಾರು, ತಿನ್ನಿಸಿದವರು ಯಾರು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಚುನಾವಣಾ ಬಾಂಡ್ ವಿಚಾರದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಕಳ್ಳಾಟ ಆಡುತ್ತಿರುವುದೇಕೆ ಎಂದು ಕಾಂಗ್ರೆಸ್ ಎಕ್ಸ್‌ನಲ್ಲಿ ಬರೆದುಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.