ADVERTISEMENT

ಬೆಸ್ಕಾಂ‌ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಕಡಿತ: ಸುನಿಲ್ ಕುಮಾರ್

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2022, 7:02 IST
Last Updated 30 ಡಿಸೆಂಬರ್ 2022, 7:02 IST
ಸುನಿಲ್ ಕುಮಾರ್
ಸುನಿಲ್ ಕುಮಾರ್   

ಬೆಂಗಳೂರು: ಬೆಸ್ಕಾಂ‌ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಸರ್ಕಾರ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗೆದುಕೊಂಡಿದೆ.

ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ.

ಈ ಕುರಿತಂತೆ ಇಂಧನ ಸಚಿವ ಸುನಿಲ್ ಕುಮಾರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.