ADVERTISEMENT

ವಿದ್ಯುತ್ ದರ ಯೂನಿಟ್‌ಗೆ 33 ಪೈಸೆ ಏರಿಕೆ

​ಪ್ರಜಾವಾಣಿ ವಾರ್ತೆ
Published 30 ಮೇ 2019, 6:37 IST
Last Updated 30 ಮೇ 2019, 6:37 IST
   

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಮಾಡಲಾಗಿದ್ದು, ಪ್ರತಿ ಯೂನಿಟ್‌ಗೆ 33 ಪೈಸೆ ಹೆಚ್ಚಳವಾಗಿದೆ.

ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳ ಪ್ರಸ್ತಾವನೆ ಮೇರೆಗೆ 2019–20ನೇ ಸಾಲಿನ ದರ ಪರಿಷ್ಕರಣೆ ಮಾಡಲಾಗಿದೆ ಎಂದು ಕೆಇಆರ್‌ಸಿ (ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ) ತಿಳಿಸಿದೆ.

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ, ‌ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಇತ್ತೀಚೆಗೆ ವರದಿಯಾಗಿತ್ತು.‘ವಿದ್ಯುತ್‌ ದರ ಪರಿಷ್ಕರಣೆ ಖಚಿತವಾಗಿದ್ದು, ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಂಡ ಬಳಿಕ ಘೋಷಣೆಯಾಗಲಿದೆ. ಪರಿಷ್ಕೃತ ದರ ಏಪ್ರಿಲ್‌ 1ರಿಂದಲೇ ಪೂರ್ವಾನ್ವಯ ಆಗಲಿದೆ’ ಎಂದು ಕೆಇಆರ್‌ಸಿ ಮೂಲಗಳು ತಿಳಿಸಿದ್ದವು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.