ADVERTISEMENT

ಕಾಡಾನೆ ದಾಳಿ: ಅರಣ್ಯ ವೀಕ್ಷಕ ಸಾವು

​ಪ್ರಜಾವಾಣಿ ವಾರ್ತೆ
Published 21 ಮೇ 2019, 16:40 IST
Last Updated 21 ಮೇ 2019, 16:40 IST

ಹನೂರು: ಕಾವೇರಿ ವನ್ಯಧಾಮದಲ್ಲಿ ಅರಣ್ಯ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಲಗತಂಬಡಿ (38) ಎಂಬುವವರು, ಕಾಡಾನೆ ದಾಳಿಗೆ ಮಂಗಳವಾರ ಬಲಿಯಾಗಿದ್ದಾರೆ.

ಗೋಪಿನಾಥಂ ವನ್ಯಜೀವಿ ವಲಯದ ನಾಗಮಲೆ ಬೀಟ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಒಂಟಿ ಸಲಗವೊಂದು ಹಲಗತಂಬಡಿ ಅವರ ಮೇಲೆ ಏಕಾಏಕಿ ಎರಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾಗಿ ಅರಣ್ಯ ಅಧಿಕಾರಿಗಳು ತಿಳಿಸಿದರು.

ಹಲಗತಂಗಡಿ ಅವರು ನಾಗಮಲೆಯ ಬೇಟೆ ತಡೆ ಶಿಬಿರದಲ್ಲಿ ಎಂಟು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು.

ADVERTISEMENT

ಪ್ರತಿಭಟನೆ: ಪರಿಹಾರ ನೀಡುವಂತೆ ಒತ್ತಾಯಿಸಿ, ಅವರ ಕುಟುಂಬದ ಸದಸ್ಯರು ಇಲ್ಲಿನ ಆರೋಗ್ಯ ಕೇಂದ್ರದ ಮುಂದೆ ಕೆಲ ಹೊತ್ತು ಪ್ರತಿಭಟನೆ ನಡೆಸಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಂಕರಾಜು ಅವರು ಪರಿಹಾರದ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.