ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಗುರುವಾರ ಕಾಡಾನೆ ದಾಳಿಗೆ ಸಿಲುಕಿ, ಅರಣ್ಯ ವೀಕ್ಷಕ (ಫಾರೆಸ್ಟ್ ವಾಚರ್) ಗುರುರಾಜ್ (52) ಮೃತಪಟ್ಟಿದ್ದಾರೆ.
ನಾಗರಹೊಳೆ ಮುಖ್ಯ ಕಚೇರಿ ಸಮೀಪದ ದೊಡ್ಡಹಳ್ಳ ಬೀಟ್‌ಗೆ ಸೇರಿದ ಗದ್ದೆಹಾಡಿಯಲ್ಲಿ,ಇತರ ಸಿಬ್ಬಂದಿಯೊಂದಿಗೆ ಗಸ್ತಿನಲ್ಲಿದ್ದಾಗ ಅವರ ಮೇಲೆ ಕಾಡಾನೆ ದಾಳಿ ನಡೆಸಿದೆ. ಗುರುರಾಜ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಶೋಕ್ ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹುಲಿ ಯೋಜನೆ ನಿರ್ದೇಶಕ ಮಹೇಶ್‌ಕುಮಾರ್ ತಿಳಿಸಿದ್ದಾರೆ.
ಹುಣಸೂರಿನಲ್ಲಿ ನೆಲೆಸಿದ್ದ ಗುರುರಾಜ್, 1991ರಿಂದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕ್ಷೇಮಾಭಿವೃದ್ಧಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ನಾಗರಹೊಳೆ ಹುಲಿ ರಕ್ಷಿತಾರಣ್ಯದ ನಿರ್ದೇಶಕರಾಗಿದ್ದ ಮಣಿಕಂಠನ್ ಅವರು,2018ರಲ್ಲಿ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.