ಸಿದ್ದಾಪುರ: ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಕಾರ್ಮಿಕ ಮಹಿಳೆಗೆ ಗಂಭೀರ ಗಾಯಗೊಂಡಿದ್ದು, ಪ್ರಣಾಪಾಯದಿಂದ ಪಾರಾಗಿದ್ದಾರೆ.
ಬಿಬಿಟಿಸಿ ಸಂಸ್ಥೆಗೆ ಸೇರಿದ ಬೀಟಿಕಾಡು ಕಾಫಿ ತೋಟದ ಕಾರ್ಮಿಕ ಮಹಿಳೆ ಕಮಲಾ (55) ಎಂಬವರು ಇಲ್ಲಿನ ಬಂಗಲೆಯಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ಗುರುವಾರ ಕೆಲಸ ಮುಗಿಸಿ ಮನೆಗೆ ಹಿಂತಿರುತ್ತಿದ್ದ ಸಂದರ್ಭದಲ್ಲಿ ಕಾಡಾನೆಯೊಂದು ಏಕಾ–ಏಕಿ ದಾಳಿಗೆ ನಡೆಸಿದೆ. ಇದರಿಂದ ಕಮಲಾ ಅವರ ಸೊಂಟ ಹಾಗೂ ಕಾಲಿಗೆ ತೀವ್ರ ಪೆಟ್ಟಾಗಿದೆ. ಗಾಯಾಳುವನ್ನು ಅಮ್ಮತ್ತಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ವಿರಾಜಪೇಟೆ ಹಾಗೂ ಕಣ್ಣಂಗಾಲ ಗ್ರಾಮದಲ್ಲಿ ಒಂದೇ ದಿನ ಎರಡು ಕಡೆ ಕಾಡಾನೆ ದಾಳಿ ಮಾಡಿದ್ದು, ಇದೀಗ ಮತ್ತೊಂದು ಪ್ರಕರಣ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರ ಸೇರಿದಂತೆ ಸುತ್ತಮುತ್ತಲ ಭಾಗದಲ್ಲಿ ಕಾಡಾನೆ ಉಪಟಳ ಮಿತಿಮೀರಿದ್ದು, ಸಾರ್ವಜನಿಕರು ಭಯದಲ್ಲೇ ದಿನಕಳೆಯುವ ವಾತಾವರಣ ನಿರ್ಮಾಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.