ADVERTISEMENT

ಕಬ್ಬಿನಗದ್ದೆ: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಮತ್ತೊಬ್ಬರ ಸ್ಥಿತಿ ಗಂಭೀರ, ಜಾನುವಾರು ಮನೆಗೆ ಕರೆತರಲು ಹೋದಾಗ ಘಟನೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2020, 11:45 IST
Last Updated 11 ಏಪ್ರಿಲ್ 2020, 11:45 IST
ಗಾಯಾಳು ಮುತ್ತ ಅವರನ್ನು ಚಿಕಿತ್ಸೆಗಾಗಿ ಕುಶಾಲನಗರ ಆಸ್ಪತ್ರೆಗೆ ಕರೆ ತಂದ ಸಂದರ್ಭ  
ಗಾಯಾಳು ಮುತ್ತ ಅವರನ್ನು ಚಿಕಿತ್ಸೆಗಾಗಿ ಕುಶಾಲನಗರ ಆಸ್ಪತ್ರೆಗೆ ಕರೆ ತಂದ ಸಂದರ್ಭ     

ಕುಶಾಲನಗರ: ಕೊಡಗು ಜಿಲ್ಲೆಯ ಆನೆಕಾಡು ಮೀಸಲು ಅರಣ್ಯ ಪ್ರದೇಶ ವ್ಯಾಪ್ತಿಯ ಕಬ್ಬಿನಗದ್ದೆ ಬಳಿಯ ಅರಣ್ಯದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.

ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಬ್ಬಿನಗದ್ದೆ ಹಾಡಿ ನಿವಾಸಿ ಎಂ.ಸಿ.ಲೋಕೇಶ್(37) ಮೃತಪಟ್ಟವರು. ಅದೇ ಗ್ರಾಮದ ಮುತ್ತ (65) ಗಂಭೀರವಾಗಿ ಗಾಯಗೊಂಡಿದ್ದಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಡಿಗೆ ಮೇಯಲು ಹೋಗಿದ್ದ ಜಾನುವಾರುಗಳನ್ನು ಕರೆತರಲು ಹೋದ ವೇಳೆ ಇಬ್ಬರ ಮೇಲೂ ಕಾಡಾನೆ‌‌ ಏಕಾಏಕಿ ದಾಳಿ ನಡೆಸಿದೆ.

ದಾಳಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ ಲೋಕೇಶ್ ಅವರನ್ನು ಕೂಡಲೇ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆ ತರುತ್ತಿದ್ದ ವೇಳೆ ಮಾರ್ಗದ ಮಧ್ಯೆಯೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕುಶಾಲನಗರ ವಲಯ ಅರಣ್ಯಾಧಿಕಾರಿ ಅನನ್ಯ ಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ADVERTISEMENT

ಕಾಡಾನೆ ಹಾವಳಿ ತಡೆಗೆ ಒತ್ತಾಯ:ಆನೆಕಾಡು ಹಾಗೂ ಮೀನುಕೊಲ್ಲಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ತೀವ್ರಗೊಂಡಿದೆ. ಕಾಡಾನೆಗಳ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು. ಹುಲಿಗಳ ಹಾವಳಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಜನರಲ್ಲಿ ಆತಂಕ ಮನೆ ಮಾಡಿದೆ. ಅರಣ್ಯ ಸಿಬ್ಬಂದಿಗಳು ಗಸ್ತು ತಿರುಗುವ ಮೂಲಕ ಹುಲಿ ಪತ್ತೆ ಹಚ್ಚಿ ಸೆರೆ ಹಿಡಿಯಲು ಕ್ರಮ ಕೈಗೊಳ್ಳಬೇಕು ಎಂದು ಬಸವನಹಳ್ಳಿ ಲ್ಯಾಂಪ್ಸ್ ಸೊಸೈಟಿ ಅಧ್ಯಕ್ಷ ಆರ್.ಕೆ.ಚಂದ್ರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.