ADVERTISEMENT

ವಿದ್ಯುತ್ ಸ್ಪರ್ಶದಿಂದ ಎರಡು ಆನೆ ಸಾವು:ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2025, 14:34 IST
Last Updated 3 ನವೆಂಬರ್ 2025, 14:34 IST
   

ಬೆಂಗಳೂರು: ಬೆಳಗಾವಿ ಜಿಲ್ಲೆ ಖಾನಾಪುರದ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್‌ ಸ್ಪರ್ಶದಿಂದ ಎರಡು ಆನೆಗಳು ಸಾವಿಗೀಡಾಗಿರುವ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಆದೇಶಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಇದೇ ಪ್ರದೇಶದಲ್ಲಿ ಆನೆಗಳು ಓಡಾಡುತ್ತಿದ್ದರೂ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪ ಮಾಡಿರುವುದೇ ಆನೆಗಳ ಸಾವಿಗೆ ಕಾರಣ ಎಂಬ ಆರೋಪವಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ಲೋಪವಿದ್ದಲ್ಲಿ ಶಿಸ್ತು ಕ್ರಮದ ಶಿಫಾರಸಿನೊಂದಿಗೆ ಐದು ದಿನಗಳ ಒಳಗೆ ವರದಿ ಸಲ್ಲಿಸಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಿದ್ದಾರೆ.

ಬೇಲಿಗೆ ವಿದ್ಯುತ್ ಸಂಪರ್ಕ ನೀಡಿ ಆನೆಗಳ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ರೀತ್ಯ ಪ್ರಕರಣ ದಾಖಲಿಸುವಂತೆಯೂ ಅವರು ನಿರ್ದೇಶನ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.