ADVERTISEMENT

ಆನೆ ಹಾವಳಿಗೆ ದುಪ್ಪಟ್ಟು ಪರಿಹಾರ: ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2022, 20:27 IST
Last Updated 21 ಸೆಪ್ಟೆಂಬರ್ 2022, 20:27 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ಆನೆಗಳ ದಾಳಿಯಿಂದ ಆಗುವ ಮಾನವ ಜೀವ ಹಾನಿ ಹಾಗೂ ಬೆಳೆ ನಷ್ಟಕ್ಕೆ ನೀಡುತ್ತಿರುವ ಪರಿಹಾರದ ಮೊತ್ತವನ್ನು ದ್ವಿಗುಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

ವಿಧಾನಸಭೆಯಲ್ಲಿ ಬುಧವಾರ ನಿಯಮ 69ರಡಿ ವಿಷಯ ಪ್ರಸ್ತಾಪಿಸಿದ ಜೆಡಿಎಸ್‌ನ ಕೆ.ಎಸ್‌. ಲಿಂಗೇಶ್‌, ಕೆ. ಮಹದೇವ, ಎಚ್‌.ಕೆ. ಕುಮಾರಸ್ವಾಮಿ ಮತ್ತು ಎ.ಟಿ. ರಾಮಸ್ವಾಮಿ, ‘ಜನವಸತಿ ಪ್ರದೇಶಗಳಿಗೆ ನುಗ್ಗಿ ತೊಂದರೆ ನೀಡುತ್ತಿರುವ ಆನೆಗಳನ್ನು ಸ್ಥಳಾಂತರಿಸಬೇಕು. ಆನೆಗಳು ನಾಡಿನೊಳಕ್ಕೆ ಬರದಂತೆ ತಡೆಯಬೇಕು. ಪ್ರಾಣಹಾನಿ ಮತ್ತು ಬೆಳೆಹಾನಿಗೆ ಹೆಚ್ಚಿನ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.

ಉತ್ತರ ನೀಡಿದ ಮುಖ್ಯಮಂತ್ರಿ, ‘ಆನೆ ಹಾವಳಿ ತಡೆಗೆ ಸಮಗ್ರವಾಗಿ ಕ್ರಮ ಕೈಗೊಳ್ಳಲಾಗುವುದು. ಸೋಲಾರ್‌ ತಡೆ ಬೇಲಿ ನಿರ್ಮಾಣಕ್ಕೆ ₹ 100 ಕೋಟಿ ಒದಗಿಸಲಾಗಿದೆ. ಎರಡನೇ ಹಂತದಲ್ಲಿ ಇನ್ನಷ್ಟು ಅನುದಾನ ಒದಗಿಸಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.