ಅರಣ್ಯ ಸಚಿವ ಈಶ್ವರ ಖಂಡ್ರೆ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ತಡೆಗಟ್ಟಿ, ಅವುಗಳನ್ನು ಕಾಡಿಗೆ ಅಟ್ಟಲು ವಿಶೇಷ ಆನೆ ಕಾರ್ಯಪಡೆ ರಚನೆಗೆ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅನುಮೋದನೆ ನೀಡಿದ್ದಾರೆ. ಈ ಕಾರ್ಯಪಡೆಯಲ್ಲಿ 48 ಸಿಬ್ಬಂದಿ ಇರಲಿದ್ದಾರೆ ಎಂದು ಅರಣ್ಯ ಇಲಾಖೆ ತಿಳಿಸಿದೆ.
ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾರ್ಯಪಡೆಯ ಮುಖ್ಯಸ್ಥರಾಗಲಿದ್ದಾರೆ. ತಲಾ ಒಬ್ಬರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಪಶುವೈದ್ಯರು, ಒಬ್ಬ ವಲಯ ಅರಣ್ಯಾಧಿಕಾರಿ ಇರಲಿದ್ದಾರೆ. ಜತೆಗೆ ನಾಲ್ವರು ಉಪ ವಲಯ ಅರಣ್ಯಾಧಿಕಾರಿ, ಎಂಟು ಅರಣ್ಯ ರಕ್ಷಕರು ಮತ್ತು 32 ಹೊರಗುತ್ತಿಗೆ ಸಿಬ್ಬಂದಿ ಕಾರ್ಯಪಡೆಯಲ್ಲಿ ಇರಲಿದ್ದಾರೆ.
ಕಾಡಾನೆಗಳು ಓಡಾಡುವ ವಸತಿ ಪ್ರದೇಶ, ರೈತರ ತೋಟ, ಜಮೀನಿನ ಬಳಿ ಕಾರ್ಯಪಡೆ ಸಿಬ್ಬಂದಿ ಗಸ್ತು ನಡೆಸಲಿದ್ದಾರೆ. ಆನೆಗಳು ಕಂಡುಬಂದಲ್ಲಿ, ಅವುಗಳನ್ನು ಕಾಡಿಗೆ ಅಟ್ಟಲು ಕ್ರಮ ತೆಗೆದುಕೊಳ್ಳಲಿದೆ. ಜತೆಗೆ ಕಾಡಾನೆಗಳ ಚಲನವಲನದ ಬಗ್ಗೆ ನಿಯಂತ್ರಣ ಕೊಠಡಿಗೆ ಮಾಹಿತಿ ರವಾನಿಸಲಿದೆ ಎಂದು ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.