ADVERTISEMENT

ಡಿಕೆಶಿ ಆಪ್ತ ಬಳಗದಲ್ಲಿದ್ದ ಶಾಸಕಿ ಲಕ್ಷ್ಮೀ ಹೆಬ್ಬಾಳಕರಗೆ ಇ.ಡಿ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2019, 3:56 IST
Last Updated 25 ಸೆಪ್ಟೆಂಬರ್ 2019, 3:56 IST
   

ಬೆಂಗಳೂರು: ಡಿ.ಕೆ.ಶಿವಕುಮಾರ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಬೆಳಗಾವಿ ಗ್ರಾಮಾಂತರದ ಕಾಂಗ್ರೆಸ್‌ಶಾಸಕಿಲಕ್ಷ್ಮೀ ಹೆಬ್ಬಾಳಕರ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ) ಮಂಗಳವಾರ ನೋಟಿಸ್‌ ನೀಡಿದೆ.

ಸೆಪ್ಟೆಂಬರ್ 19ರಂದು ವಿಚಾರಣೆಗೆ ಬರಲು ಸೂಚನೆ ನೀಡಿದೆ.ನೋಟಿಸ್‌ ಬಂದಿರುವುದನ್ನುಶಾಸಕಿ ಲಕ್ಷ್ಮೀ ಹೆಬ್ಬಾಳಕರಖಚಿತಪಡಿಸಿದ್ದು, ವಿಚಾರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ.

ಸದ್ಯ ಇ.ಡಿ ವಿಚಾರಣೆಗೆ ಒಳಗಾಗಿರುವ ಡಿ.ಕೆ. ಶಿವಕುಮಾರ್ ಅವರ ಜೊತೆ ಆರ್ಥಿಕ ವ್ಯವಹಾರ ಹೊಂದಿದ್ದರು ಎಂದು ಮೂಲಗಳು ಹೇಳುತ್ತವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.