ADVERTISEMENT

ಎಂಜಿನಿಯರಿಂಗ್ ಕೋರ್ಸ್ ಶುಲ್ಕ ಪರಿಷ್ಕರಣೆಗೆ ಸಭೆ: ಡಾ.ಸಿ.ಎನ್‌.ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2021, 19:45 IST
Last Updated 30 ಆಗಸ್ಟ್ 2021, 19:45 IST
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ   

ಮಂಗಳೂರು: ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಶುಲ್ಕ ಪರಿಷ್ಕರಣೆಗೆ ಮನವಿ ಮಾಡಿದ್ದು, ಸೆಪ್ಟೆಂಬರ್‌ ಎರಡನೇ ವಾರದಲ್ಲಿ ಸಭೆ ಕರೆದು ನಿರ್ಧರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ತಿಳಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯಕೀಯ, ದಂತ ವೈದ್ಯಕೀಯ ಕಾಲೇಜುಗಳ ಶುಲ್ಕವನ್ನು ಪ್ರತಿ ವರ್ಷ ಪರಿಷ್ಕರಿಸಲಾಗುತ್ತಿದೆ. ಎಂಜಿನಿಯರಿಂಗ್ ಕಾಲೇಜುಗಳ ಶುಲ್ಕವನ್ನು ಮೂರು ವರ್ಷಗಳಿಂದ ಪರಿಷ್ಕರಿಸಿಲ್ಲ ಎಂದರು.

ಹೊಸ ಶಿಕ್ಷಣ ನೀತಿ ವಿದ್ಯಾರ್ಥಿ ಕೇಂದ್ರಿತ, ವಿದ್ಯಾರ್ಥಿ ಸ್ನೇಹಿಯಾಗಿದೆ. ವಿದ್ಯಾರ್ಥಿ ವಿರೋಧಿ ಒಂದೇ ಒಂದು ಅಂಶವನ್ನು ವಿರೋಧಿಸುವವರು ತೋರಿಸಲಿ ಎಂದು ಸವಾಲು ಹಾಕಿದರು. ಇದನ್ನು ತರಾತುರಿಯಲ್ಲಿ ಜಾರಿಗೊಳಿಸುತ್ತಿಲ್ಲ ಎಂದು ಹೇಳಿದರು.

ADVERTISEMENT

ಕನಿಷ್ಠ ಒಂದು ಡೋಸ್‌ ಲಸಿಕೆ ಪಡೆದವರಿಗೆ ಕಾಲೇಜುಗಳಲ್ಲಿ ಭೌತಿಕ ತರಗತಿಗೆ ಹಾಜರಾಗಲು ಅವಕಾಶ ನೀಡ
ಲಾಗುವುದು. ಈಗಾಗಲೇ ರಾಜ್ಯದಲ್ಲಿ ಶೇ 86 ರಷ್ಟು ವಿದ್ಯಾರ್ಥಿಗಳಿಗೆ ಒಂದು ಡೋಸ್‌ ಲಸಿಕೆ ಹಾಕಲಾಗಿದೆ ಎಂದರು.

ವಿದ್ಯಾರ್ಥಿನಿಯರ ಸುರಕ್ಷತೆಗಾಗಿ ವಿಶ್ವವಿದ್ಯಾಲಯ ಹಾಗೂ ಕಾಲೇಜು ಕ್ಯಾಂಪಸ್‌ನಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಪಹರೆ ಹೆಚ್ಚಿಸುವ ಮೂಲಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.