ADVERTISEMENT

ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ: ಭಗವಂತ ಖೂಬ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2021, 8:33 IST
Last Updated 27 ಅಕ್ಟೋಬರ್ 2021, 8:33 IST
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬ
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬ   

ಬೆಂಗಳೂರು: ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ. ನವೆಂಬರ್ ಅಂತ್ಯದವರೆಗೂ ರೈತರ ಬೇಡಿಕೆ ಪೂರೈಸುವಷ್ಟು ರಸಗೊಬ್ಬರದ ದಾಸ್ತಾನು ಇದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ರಾಜ್ಯಕ್ಕೆ ನವೆಂಬರ್ ಅಂತ್ಯದವರೆಗೆ 2.10 ಲಕ್ಷ ಟನ್ ರಸಗೊಬ್ಬರ ಅಗತ್ಯವಿದೆ. ಅಷ್ಟು ಪ್ರಮಾಣದ ದಾಸ್ತಾನು ರಾಜ್ಯದಲ್ಲಿದೆ' ಎಂದರು.

33,000 ಟನ್ ಡಿಎಪಿ ರಸಗೊಬ್ಬರಕ್ಕೆ ಬೇಡಿಕೆ ಇದೆ. ರಾಜ್ಯದಲ್ಲಿ 36,500 ಟನ್ ಡಿಎಪಿ ದಾಸ್ತಾನು ಇದೆ. ಯೂರಿಯಾ ರಸಗೊಬ್ಬರದ ಕೊರತೆಯೂ ಇಲ್ಲ.‌ಹೆಚ್ಷಿನ ಪ್ರಮಾಣದಲ್ಲಿ ಕಾಂಪ್ಲೆಕ್ಸ್ ರಸಗೊಬ್ಬರದ ದಾಸ್ತಾನು ಇದೆ. ಯೂರಿಯಾ ಬದಲಿಗೆ ಅದನ್ನು ಬಳಸಬಹುದು ಎಂದರು.

ADVERTISEMENT

ಡಿಎಪಿ ದರ ಮಾತ್ರ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ಉಳಿದಂತೆ ಯಾವುದೇ ರಸಗೊಬ್ಬರದ ದರ ಏರಿಕೆಯಾಗಿಲ್ಲ. ಕಾಂಗ್ರೆಸ್ ಪಕ್ಷದವರು ರಾಜಕೀಯಕ್ಕಾಗಿ ರಸಗೊಬ್ಬರದ ಕೊರತೆಯಾಗಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ದರ ಏರಿಕೆ ವಿಚಾರದಲ್ಲೂ ಸುಳ್ಳು ಹಬ್ಬಿಸುತ್ತಿದ್ದಾರೆ ಎಂದು ದೂರಿದರು.

2008ರಲ್ಲಿ ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರದಲ್ಲಿತ್ತು. ಆಗ ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಉಂಟಾಗಿತ್ತು.‌ ಕಾಂಗ್ರೆಸ್ ಪಕ್ಷದವರು ಗೋಲಿಬಾರ್ ವಿಚಾರ ಮಾತ್ರ ಮಾತನಾಡುತ್ತಾರೆ. ಕೇಂದ್ರ ಸರ್ಕಾರ ರಸಗೊಬ್ಬರ ಪೂರೈಕೆ ಮಾಡುವಲ್ಲಿ ವಿಫಲವಾದ ಕುರಿತು ಏಕೆ ಮಾತನಾಡುವುದಿಲ್ಲ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.