ADVERTISEMENT

ಬಿ.ಎಂ. ಕಾವಲ್‌ನ 285 ಎಕರೆ ಪರಭಾರೆ: ರಂಗಪ್ಪ ವಿರುದ್ಧ ವಿಚಾರಣೆ

ಸಚಿವ ಆರ್.ವಿ.ದೇಶಪಾಂಡೆ ಮಾಹಿತಿ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2018, 19:59 IST
Last Updated 26 ಡಿಸೆಂಬರ್ 2018, 19:59 IST
ಕಂದಾಯ ಸಚಿವ ಆರ್.ವಿ.ದೇಶಪಾಂಡೆ
ಕಂದಾಯ ಸಚಿವ ಆರ್.ವಿ.ದೇಶಪಾಂಡೆ   

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲ್ಲೂಕಿನ ಬಿ.ಎಂ. ಕಾವಲ್‌ನ 285 ಎಕರೆ ಜಾಗವನ್ನು ಇಬ್ಬರು ಮಹಿಳೆಯರ ಹೆಸರಿ‌ಗೆ ವರ್ಗಾವಣೆ ಮಾಡಬೇಕು ಎಂದು ಆದೇಶಿಸಿದ್ದ ಬೆಂಗಳೂರು ನಗರ ವಿಶೇಷ ಜಿಲ್ಲಾಧಿಕಾರಿ ಎಸ್‌.ರಂಗಪ್ಪ ವಿರುದ್ಧ ಇಲಾಖಾ ವಿಚಾರಣೆ ನಡೆಸಲಾಗುವುದು ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಂಗಪ್ಪ ಅವರನ್ನು ಅಮಾನತು ಮಾಡುವಂತೆ ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್‌ ಕುಮಾರ್ ಅವರು ಬೆಳಗಾವಿ ಅಧಿವೇಶನದಲ್ಲಿ ಮನವಿ ಮಾಡಿದ್ದರು. ಅದರ ಮರುದಿನವೇ, ಇಲಾಖಾ ವಿಚಾರಣೆ ನಡೆಸುವಂತೆ ಕಡತವನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಕಳುಹಿಸಿದ್ದೇನೆ’ ಎಂದರು.

ರಂಗಪ್ಪ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ ಎಂದರು.

ADVERTISEMENT

ಈ ಆಸ್ತಿ ವರ್ಗಾವಣೆ ಕುರಿತು ‘ಪ್ರಜಾವಾಣಿ’ ಸರಣಿ ವರದಿಗಳನ್ನು ಪ್ರಕಟಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.