ADVERTISEMENT

2ನೇ ವರ್ಷದ ಡಿಪ್ಲೊಮಾಕ್ಕೆ ನೇರ ಪ್ರವೇಶ–ಅರ್ಜಿ

​ಪ್ರಜಾವಾಣಿ ವಾರ್ತೆ
Published 17 ಜೂನ್ 2019, 20:00 IST
Last Updated 17 ಜೂನ್ 2019, 20:00 IST

ಬೆಂಗಳೂರು: ಪದವಿಪೂರ್ವ ಹಂತದಲ್ಲಿ ವಿಜ್ಞಾನ ಅಥವಾ ಇತರ ತಾಂತ್ರಿಕ ಕೋರ್ಸ್‌ ಆಯ್ಕೆ ಮಾಡಿಕೊಂಡು ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು 2ನೇ ವರ್ಷದ ಡಿಪ್ಲೊಮಾಗೆ ಪ್ರವೇಶ ಪಡೆಯುವುದಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಜೂನ್‌ 29ರೊಳಗೆ ಅರ್ಜಿ ಸಲ್ಲಿಸಬಹುದು.

ಮೊದಲ ಹಂತದ ಇಂಟರ‍್ಯಾಕ್ಟೀವ್‌ ಕೌನ್ಸೆಲಿಂಗ್‌ ಜುಲೈ 5ರಂದು ನಡೆಯಲಿದೆ. ಆನ್‌ಲೈನ್‌ನಲ್ಲಿ ನಡೆಯುವ ಕೌನ್ಸೆಲಿಂಗ್‌ ವೇಳೆ ತಮಗೆ ಬೇಕಾದ ಪಾಲಿಟೆಕ್ನಿಕ್‌ ಕಾಲೇಜ್‌ನಲ್ಲಿ ವಿವಿಧ ಡಿಪ್ಲೊಮಾ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬಹುದು.

‌ಮಾಹಿತಿಗೆ dte.kar.nic.in ಸಂಪರ್ಕಿಸಬಹುದು ಎಂದು ತಾಂತ್ರಿಕ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.