ADVERTISEMENT

ವಸತಿ ಶಾಲೆಗೆ ಪ್ರವೇಶ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2019, 16:57 IST
Last Updated 18 ಮಾರ್ಚ್ 2019, 16:57 IST

ಬೆಂಗಳೂರು: ಮಾರತ್ತಹಳ್ಳಿಯ ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠದ ವಸತಿ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಬಯಸುವ ಬಾಲಕರಿಗಾಗಿ ಏ.7ರಂದು ಬೆಳಿಗ್ಗೆ 11.30ಕ್ಕೆ ಪ್ರವೇಶ ಪರೀಕ್ಷೆ ನಡೆಯಲಿದೆ.

ಕಂಪ್ಯೂಟರ್, ಸ್ಮಾರ್ಟ್‌ ಕ್ಲಾಸ್‌, ಯೋಗ, ಸಂಗೀತ ಮತ್ತು ಕ್ರೀಡೆ ಜೊತೆಗೆ10ನೇ ತರಗತಿವರೆಗೆ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತದೆ.

ವಿದ್ಯಾರ್ಥಿಗಳು ಪಾಸ್‌ಪೋರ್ಟ್‌ ಅಳತೆಯ ಇತ್ತೀಚಿನ ಭಾವಚಿತ್ರ, ಆಧಾರ್ ಕಾರ್ಡ್‌ ಮತ್ತು ಬಿಪಿಎಲ್ ಕಾರ್ಡ್ ನಕಲು ಪ್ರತಿಯೊಂದಿಗೆ
ಪರೀಕ್ಷೆಗೆ ನೇರವಾಗಿ ಹಾಜರಾಗಬಹುದು ಎಂದು ಮಠದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಾಹಿತಿಗೆ– 99021 20758

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.