ಬೆಂಗಳೂರು: ವನ್ಯಜೀವಿ, ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆ ಕುರಿತು ಅರಣ್ಯ ಇಲಾಖೆ ರಾಯಭಾರಿಯಾಗಿರುವ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರ ಜತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಮಂಗಳವಾರ ಸಮಾಲೋಚನೆ ನಡೆಸಿದರು.
ನಂತರ ಸುದ್ದಿಗಾರರ ಜತೆ ಮಾತನಾಡಿದ ಖಂಡ್ರೆ, ವನ್ಯಜೀವಿ, ಅರಣ್ಯ, ಪರಿಸರ ಪ್ರೇಮಿಯೂ ಆಗಿರುವ ಅನಿಲ್ ಕುಂಬ್ಳೆ ಅವರು ರಾಯಭಾರಿಯಾಗಿರುವುದು ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಗೆ ಬಲ ತಂದಿದೆ. ಯಾವುದೇ ಸಂಭಾವನೆ ಪಡೆಯದೆ ಕೆಲಸ ಮಾಡಲು ಒಪ್ಪಿರುವುದು ಅವರ ಪರಿಸರ ಕಾಳಜಿ, ಬದ್ಧತೆಗೆ ಮಾದರಿ ಎಂದು ಶ್ಲಾಘಿಸಿದರು.
ಕ್ರಿಕೆಟ್ ಪ್ರಿಯರ ಹೃದಯದಲ್ಲಿ ಸದಾ ನೆಲಸಿರುವ ಅವರು ಅರಣ್ಯ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಪ್ರಚಾರ ಕಾರ್ಯ ಕೈಗೊಳ್ಳುವರು. ಜನರಲ್ಲಿ ಜಾಗೃತಿ ಮೂಡಿಸುವರು. ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವವೂ ಅವರಿಗಿದೆ ಎಂದು ಹೇಳಿದರು.
ಅನಿಲ್ ಕುಂಬ್ಳೆ ಮಾತನಾಡಿ, ತಮ್ಮನ್ನು ಅರಣ್ಯ, ವನ್ಯಜೀವಿ ರಾಯಭಾರಿಯಾಗಿ ನೇಮಕ ಮಾಡಿದ ಸರ್ಕಾರಕ್ಕೆ ಧನ್ಯವಾದ ಅರ್ಪಿಸುವೆ. ಇಲಾಖೆಯ ಜತೆಗೂಡಿ ವನ್ಯಜೀವಿ, ಪರಿಸರ ಜಾಗೃತಿಗೆ ಶ್ರಮಿಸುವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.