
ಬೆಂಗಳೂರು: ಕೇಂದ್ರ ಸರ್ಕಾರದ ಅಡಿಯಲ್ಲಿರುವ ಎನ್‌ಎಂಡಿಸಿಯಿಂದ ಅಕ್ರಮ ಅದಿರು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ನೀಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಕ್ರಮವಾಗಿ ಅದಿರು ಸಾಗಣೆ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ‘ಪ್ರಜಾವಾಣಿ’ ವಿಶೇಷ ವರದಿ ಪ್ರಕಟಿಸಿತ್ತು.
ಇದರ ಬೆನ್ನಲ್ಲೇ, ಸಚಿವರು ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ಮೂರು ಸದಸ್ಯರ ತಂಡವನ್ನು ರಚಿಸಿದ್ದಾರೆ. ತನಿಖೆ ನಡೆಸಿ, 7 ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.
ಈ ಪ್ರಕರಣದಲ್ಲಿ ಅರಣ್ಯ ಪ್ರದೇಶದಿಂದ ಕಬ್ಬಿಣದ ಅದಿರು ಅಕ್ರಮವಾಗಿ ಸಾಗಾಟವಾಗಿದೆಯೇ, ನಿಯಮಗಳ ಉಲ್ಲಂಘನೆ ಆಗಿದೆಯೇ ಎಂಬುದರ ಕುರಿತು ತನಿಖೆ ನಡೆಸಬೇಕು. ಆರೋಪಿ ಲಾರಿ ಚಾಲಕ ನೀಡಿದ ಮಾಹಿತಿ ಆಧರಿಸಿ ಎರಡೂವರೆ ಸಾವಿರ ಟನ್ ಕಬ್ಬಿಣ ಅದಿರನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.