
ಮೈಸೂರು: ‘ ಜಿಲ್ಲೆಯ ಸರಗೂರು ತಾಲ್ಲೂಕಿನ ಬೆಣ್ಣೆಗೆರೆ ಬಳಿ ಹುಲಿ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಸೂಚಿಸಿದ್ದೇನೆ. ಘಟನೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದರು.
ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ‘ ಹುಲಿಯ ಓಡಾಟದ ಬಗ್ಗೆ ದೂರು ಬಂದಿದ್ದರೂ ಬೋನು ಇಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರೆ ಅವರ ಮೇಲೆ ಕ್ರಮ ಜರುಗಿಸಲಾಗುವುದು. ಎಚ್.ಡಿ.ಕೋಟೆ, ಸರಗೂರಿನಲ್ಲೇ ಮರಣೋತ್ತರ ಪರೀಕ್ಷೆ ನಡೆಸಲು ಅವಕಾಶ ಇದ್ದರೂ, ಮೈಸೂರಿಗೆ ಏಕೆ ಶವ ತಂದರು ಎಂಬ ಬಗ್ಗೆ ಗೊತ್ತಿಲ್ಲ. ದೇಹ ಕೊಳೆಯುವ ಸ್ಥಿತಿ ತಲುಪಿದ್ದರಿಂದ ತಂದಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತನಿಖೆ ಮಾಡಿಸಿ ಕ್ರಮ ಜರುಗಿಸಲಾಗುವುದು’ ಎಂದು ತಿಳಿಸಿದರು.
‘ ಹುಲಿ– ಆನೆ ಸೆರೆ ಕಾರ್ಯಾಚರಣೆ ಸೇರಿದಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸದ್ಯದಲ್ಲೇ ಬಂಡೀಪುರದಲ್ಲಿ ಅಧಿಕಾರಿಗಳ ಸಭೆ ಆಯೋಜಿಸಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.