ಶಿವಮೊಗ್ಗ:ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕಾಣಲು ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ‘ಸಿದ್ದರಾಮಯ್ಯ ನನ್ನ ಗುರು’ ಎಂದುಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ನೀಡಿದ್ದ ಹೇಳಿಕೆಗೆ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ರಮೇಶ್ ಅವರ ಹೇಳಿಕೆ ಬಿಜೆಪಿ ತತ್ವ, ಸಿದ್ಧಾಂತಗಳಿಗೆ ವಿರುದ್ಧವಾಗಿದೆ. ಸಿದ್ದರಾಮಯ್ಯ ಎಂದಿಗೂ ನಮ್ಮ ನಾಯಕ ಅಲ್ಲ. ಬಿಜೆಪಿಗೆ ಸೇರ್ಪಡೆಯಾದ ನಂತರ ಈ ಸತ್ಯವನ್ನು ರಮೇಶ್ ತಿಳಿಯಬೇಕಿತ್ತು. ನಮ್ಮದು ಬಿಜೆಪಿ ಪಕ್ಷ. ಪ್ರಧಾನಿ ನರೇಂದ್ರ ಮೋದಿಯೇ ನಮ್ಮ ನಾಯಕ,’ ಎಂದು ಈಶ್ವರಪ್ಪ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.