ADVERTISEMENT

ಮಕ್ಕಳಿಗೆ ಕೋವಿಡ್; ಸರ್ಕಾರದಿಂದ ಸಂಯೋಜಿತ ಕ್ರಮ: ಸಿಎಂ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2021, 9:06 IST
Last Updated 12 ಆಗಸ್ಟ್ 2021, 9:06 IST
   

ಮಂಗಳೂರು: ಕೋವಿಡ್-19 ಮೂರನೇ ಅಲೆ ಪರಿಣಾಮ ರಾಜ್ಯದಲ್ಲಿ 240 ಮಕ್ಕಳು ಬಾಧಿತರಾಗಿದ್ದು ಸರ್ಕಾರ, ಆರೋಗ್ಯ ಇಲಾಖೆ, ಮಕ್ಕಳ ನಿಗಾ ಇಲಾಖೆಗಳನ್ನು (ಪಿಡಿಯಾಟ್ರಿಕ್) ಸಂಯೋಜಿಸಿ ಕಾರ್ಯ ನಿರ್ವಹಿಸುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ಈಗಾಗಲೇ ಮಕ್ಕಳ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ರಾಜ್ಯದಾದ್ಯಂತ ಆರೋಗ್ಯ ಶಿಬಿರಗಳ ಮೂಲಕ ಗುತುತಿಸಲಾಗಿದೆ.

ಕೋವಿಡ್ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರುಣಾಮ ಬೀರದಂತೆ ಮಕ್ಕಳ ರೋಗ ತಜ್ಞ ವೈದ್ಯರ ತಂಡ, ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ. ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಅವರು ತಿಳಿಸಿದರು.

ADVERTISEMENT

ಶಾಸಕರು, ಪಕ್ಷದ ಪ್ರಮುಖರು, ಜಿಲ್ಲಾಧಿಕಾರಿ, ಅಧಿಕಾರಿಗಳು ಇದ್ದರು.

ಅಂಬೇಡ್ಕರ್ ಭವನ ಲೋಕಾರ್ಪಣೆ
ಮಂಗಳೂರು: ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ಬೊಮ್ಮಾಯಿ ಅವರು ಗುರುವಾರ ಲೋಕಾರ್ಪಣೆ ಮಾಡಿದರು.

ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್, ವೈದ್ಯಕೀಯ ಶಿಕ್ಷಣ ಸಚಿವರಾದ ಸುಧಾಕರ್, ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.