ADVERTISEMENT

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಶುಲ್ಕ ಪಾವತಿಗೆ ಇದೇ 28 ಕೊನೆ ದಿನ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2020, 19:29 IST
Last Updated 25 ಆಗಸ್ಟ್ 2020, 19:29 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಸೆ. 21ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ ಹಾಜರಾಗುವ ಪುನರಾವರ್ತಿತ ಅಭ್ಯರ್ಥಿಗಳು ₹ 300 ದಂಡದೊಂದಿಗೆ ಪರೀಕ್ಷಾ ಶುಲ್ಕ ಪಾವತಿಸಲು ಇದೇ 28 ಕೊನೆಯ ದಿನ.

‘ವಿದ್ಯಾರ್ಥಿಗಳು ಮತ್ತು ಪೋಷಕರ ಮನವಿಯ ಮೇರೆಗೆ ಅಂತಿಮ ದಿನವನ್ನು ವಿಸ್ತರಿಸಲಾಗಿದೆ. ಸಂಬಂಧಿಸಿದ ಶಾಲೆಗಳ ಮುಖ್ಯೋಪಾಧ್ಯಾಯರು 28ರೊಳಗೆ ವಿದ್ಯಾರ್ಥಿಗಳಿಂದ ಶುಲ್ಕ ಸಂಗ್ರಹಿಸಿ ಬ್ಯಾಂಕಿಗೆ ಪಾವತಿಸಿ, 29ರೊಳಗೆ ಮಂಡಳಿಗೆ
ತಲುಪಿಸಬೇಕು’ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT