ADVERTISEMENT

ವಿಪತ್ತು ಪರಿಹಾರ ನಿಧಿ ಸ್ಥಾಪನೆ: ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2021, 18:15 IST
Last Updated 8 ಫೆಬ್ರುವರಿ 2021, 18:15 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ವಿಪತ್ತು ನಿರ್ವಹಣೆ ಕಾಯ್ದೆ ಪ್ರಕಾರ ರಾಜ್ಯ ವಿಪತ್ತು ಪರಿಹಾರ ನಿಧಿ ಸ್ಥಾಪಿಸಲಾಗುವುದು ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ಪ್ರಮಾಣಪತ್ರ ಸಲ್ಲಿಸಿದ್ದಾರೆ.

ರಾಜ್ಯ ವಿಪತ್ತು ಪರಿಹಾರ ನಿಧಿ (ಎಸ್‌ಡಿಆರ್‌ಎಫ್) ಹೆಸರಿನಿಂದ ಹೊಸ ಖಾತೆ ತೆರೆಯಲಾಗಿದೆ. ಈಗಾಗಲೇ ಅಸ್ಥಿತ್ವದಲ್ಲಿ ಇರುವ ನೈಸರ್ಗಿಕ ವಿಕೋಪ ನಿರ್ವಹಣೆ ನಿಧಿಯ ಮೊತ್ತವನ್ನು ಹೊಸ ಖಾತೆಗೆ ವರ್ಗಾಯಿಸಲಾಗುವುದು ಎಂದು ತಿಳಿಸಿದ್ದಾರೆ.

ADVERTISEMENT

ಜಿಲ್ಲಾಧಿಕಾರಿ ಹೆಸರಿನಲ್ಲಿ ಇರುವ ವಿಪತ್ತು ನಿರ್ವಹಣಾ ನಿಧಿಯ ಮೊತ್ತವನ್ನು ಜಿಲ್ಲಾ ವಿಪತ್ತು ಪರಿಹಾರ ನಿಧಿಗೆ ವರ್ಗಾಯಿಸಲು ಸೂಚನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಫೆ.4ರಂದು ಅಧಿಸೂಚನೆ ಹೊರಡಿಸಲಾಗಿದೆ ಎಂದು ವಿವರಿಸಿದ್ದಾರೆ.

ವಿಪತ್ತು ನಿರ್ವಹಣಾ ಕಾಯ್ದೆಯಡಿ ನಿಧಿ ಸ್ಥಾಪಿಸದ ಕಾರಣಕ್ಕೆ ಸರ್ಕಾರವನ್ನು ಈ ಹಿಂದಿನ ವಿಚಾರಣೆ ವೇಳೆ ಪೀಠ ತರಾಟೆಗೆ ತೆಗೆದುಕೊಂಡಿತ್ತು. ಕಾಯ್ದೆ ಜಾರಿಗೆ ಬಂದು 14 ವರ್ಷ ಕಳೆದರೂ ನಿಧಿ ಸ್ಥಾಪಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.