ಬೆಂಗಳೂರು: ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳ ಪಟ್ಟಿಯಲ್ಲಿರುವ ಮೇದಾರ ಸಮುದಾಯದ ಅಭಿವೃದ್ಧಿ ಉದ್ದೇಶದಿಂದ ‘ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ’ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ– 1ರಲ್ಲಿರುವ ಮೇದರ, ಬಟ್ಟರ್, ಬರ್ನೆಡ್, ಗೌರಿಗ, ಗೌವ್‌ರಿಗ, ಗೌರಿ, ಗೌರಿ ಮರಾಠ, ಮೇದರಿ, ಬುರುಡ್ ಸಮುದಾಯಗಳ ಅಭಿವೃದ್ಧಿಗಾಗಿ ‘ಕರ್ನಾಟಕ ಮೇದರ ಅಭಿವೃದ್ಧಿ’ ನಿಗಮ ಸ್ಥಾಪಿಸಿ ಫೆ. 20ರಂದು ಆದೇಶ ಹೊರಡಿಸಲಾಗಿತ್ತು. ಆದರೆ, ಮೇದರ ಅಭಿವೃದ್ಧಿ ನಿಗಮ ಸ್ಥಾಪನೆಯು ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವುದರಿಂದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಫೆ. 20ರಂದು ಹೊರಡಿಸಿದ್ದ ಆದೇಶವನ್ನು ಇದೇ 9ರಂದು ಹಿಂಪಡೆಯಲಾಗಿತ್ತು.
ಪರಿಶಿಷ್ಟ ಪಂಗಡಗಳ ಸೂಕ್ಷ್ಮ, ಅತಿ ಸೂಕ್ಷ್ಮ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಪಟ್ಟಿಯಲ್ಲಿ ಮೇದರ ಸಮುದಾಯ ಇರುವುದರಿಂದ ಇದೀಗ ಹೊಸತಾಗಿ ಆದೇಶ ಹೊರಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.