ADVERTISEMENT

ಎತ್ತಿನಹೊಳೆ: ಲಾರಿಗಳತ್ತ ಕಲ್ಲು ತೂರಿದ ರೈತರು

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2018, 16:41 IST
Last Updated 27 ಡಿಸೆಂಬರ್ 2018, 16:41 IST
ಉಂಡಿಗನಾಳು ಬಳಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿ ವೀಕ್ಷಿಸಿದ ಅಧಿಕಾರಿಗಳು
ಉಂಡಿಗನಾಳು ಬಳಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿ ವೀಕ್ಷಿಸಿದ ಅಧಿಕಾರಿಗಳು   

ಅರಸೀಕೆರೆ: ಎತ್ತಿನಹೊಳೆ ಕಾಮಗಾರಿ ನಡೆಯುತ್ತಿರುವ ತಾಲ್ಲೂಕಿನ ಉಂಡಿಗನಾಳು ಗ್ರಾಮಕ್ಕೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್‌ ಮತ್ತು ಅಧಿಕಾರಿಗಳು ಗುರುವಾರ ಭೇಟಿ ನೀಡಿದ ವೇಳೆ ರೈತರು ಲಾರಿಗಳತ್ತ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದರು.

‘ಕಾಮಗಾರಿ ಮೂರು ವರ್ಷಗಳಿಂದ ನಡೆಯುತ್ತಿದೆ. ಇದರಿಂದ ನಮಗೆ ಜಮೀನಿನಲ್ಲಿ ಬೆಳೆ ಬೆಳೆಯಲಾಗುತ್ತಿಲ್ಲ. ಭೂಮಿ ಕಳೆದುಕೊಂಡಿದ್ದಕ್ಕೆ ಪರಿಹಾರವೂ ಸಿಕ್ಕಿಲ್ಲ. ಪರಿಹಾರ ನೀಡಿ ಇಲ್ಲವೇ ನಮ್ಮ ಜಮೀನು ನಮಗೆ ಬಿಟ್ಟು ಕೊಡಿ’ ಎಂದು ಹರಿಹಾಯ್ದರು.

ರೈತರ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಿ ಪರಿಹಾರ ಕೊಡಿಸಲಾಗುವುದು ಎಂದು ಶ್ವೇತಾ ದೇವರಾಜ್ ಹಾಗೂ ಎತ್ತಿಹೊಳೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ಗಿರೀಶ್ ನಂದನ್‌ ಭರವಸೆ ನೀಡಿದ ನಂತರ ರೈತರು ಸುಮ್ಮನಾದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.