ADVERTISEMENT

ಬೆಂಗಳೂರನ್ನು ಸಂಪರ್ಕಿಸುವ ಎಕ್ಸ್‌ಪ್ರೆಸ್‌ವೇಗಳಲ್ಲಿ 236 EV ಚಾರ್ಜಿಂಗ್‌ ಕೇಂದ್ರ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2025, 16:24 IST
Last Updated 2 ಡಿಸೆಂಬರ್ 2025, 16:24 IST
   

ನವದೆಹಲಿ: ಬೆಂಗಳೂರನ್ನು ಸಂಪರ್ಕಿಸುವ ಹೆದ್ದಾರಿಗಳು ಹಾಗೂ ಎಕ್ಸ್‌ಪ್ರೆಸ್‌ವೇಗಳಲ್ಲಿ 236 ಇ.ವಿ.ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಭಾರಿ ಕೈಗಾರಿಕೆ ಇಲಾಖೆಯ ರಾಜ್ಯ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮಾ ತಿಳಿಸಿದ್ದಾರೆ. 

ಲೋಕಸಭೆಯಲ್ಲಿ ಮಂಗಳವಾರ ಪ‍್ರಶ್ನೋತ್ತರ ಅವಧಿಯಲ್ಲಿ ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್‌ ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ. 

ಬೆಂಗಳೂರು–ಚೆನ್ನೈ ಎಕ್ಸ್‌‍ಪ್ರೆಸ್‌ವೇನಲ್ಲಿ 30, ಬೆಂಗಳೂರು–ಹೈದರಾಬಾದ್‌ ಹೆದ್ದಾರಿಯಲ್ಲಿ 64, ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ 33 ಹಾಗೂ ಬೆಂಗಳೂರು–ಪುಣೆ ಹೆದ್ದಾರಿಯಲ್ಲಿ 109 ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.