ADVERTISEMENT

ಪ್ರತಿ ಜಿಲ್ಲೆಯಲ್ಲಿ ‘ರೈತರೊಂದಿಗೆ ಒಂದು ದಿನ: ಸಚಿವ ಪಾಟೀಲ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2020, 21:44 IST
Last Updated 12 ನವೆಂಬರ್ 2020, 21:44 IST
ಬಿ.ಸಿ. ಪಾಟೀಲ
ಬಿ.ಸಿ. ಪಾಟೀಲ   

ಬೆಂಗಳೂರು: ಪ್ರತಿ ತಿಂಗಳು ಎರಡು ಜಿಲ್ಲೆಯಲ್ಲಿ ‘ರೈತರೊಂದಿಗೊಂದು ದಿನ’ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಂದಾಗಿರುವ ಕೃಷಿ ಸಚಿವ ಬಿ.ಸಿ. ಪಾಟೀಲ, ತಮ್ಮ ಜನ್ಮದಿನವಾದ ಇದೇ 14ರಿಂದ ಮಂಡ್ಯದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲು ನಿರ್ಧರಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಪಾಟೀಲ, ‘ಬೆಳಗ್ಗಿನಿಂದ ಸಂಜೆವರೆಗೆ ಈ ಕಾರ್ಯಕ್ರಮ ನಡೆಯಲಿದ್ದು, ರೈತರೊಂದಿಗೆ ಸಂವಾದ ನಡೆಸಲು ತೀರ್ಮಾನಿಸಿದ್ದೇನೆ. ಬಳಿಕ ಸಮಗ್ರ ವರದಿಯನ್ನು ಮುಖ್ಯಮಂತ್ರಿಗೆ ನೀಡಿ ಕೃಷಿ ಇಲಾಖೆಯಲ್ಲಿ ಹೊಸ ಬದಲಾವಣೆ ತರಲಾಗುವುದು’ ಎಂದರು.

‘ಏ. 1ರಿಂದಲೇ ರೈತರ ಮನೆಯಲ್ಲಿ ವಾಸ್ತವ್ಯ ಮಾಡಬೇಕೆಂದು ಯೋಚಿಸಿದ್ದೆ. ಕೋವಿಡ್‌ನಿಂದ ಸಾಧ್ಯವಾಗಿರಲಿಲ್ಲ’ ಎಂದರು.

ADVERTISEMENT

‘ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕು‌. ಎಲ್ಲ ಜಿಲ್ಲೆಗಳನ್ನು ಮತ್ತೊಮ್ಮೆ ಸುತ್ತಾಡಿ ರೈತರ ಸಮಸ್ಯೆಗಳನ್ನು ಅರಿಯಲು ಪ್ರಯತ್ನಿಸುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.