ಹೊಸಪೇಟೆ (ವಿಜಯನಗರ): ‘ಹುಬ್ಬಳ್ಳಿಯಲ್ಲಿ ಶಾಂತಿ ಕದಡುವ ಕೆಲಸ ನಡೆದಿರುವುದು ದುರದೃಷ್ಟಕರ’ ಎಂದು ಶಾಸಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯಿಸಿದರು.
ಪ್ರಕರಣದಲ್ಲಿ ಆರೋಪಿಗಳು ಯಾರೇ ಇರಲಿ ತನಿಖೆ ಮಾಡಿ ಬಂಧಿಸಬೇಕು. ಕೋಮುವಾದ ನಿಯಂತ್ರಿಸುವ ಕೆಲಸ ಪೊಲೀಸರು ಮಾಡಬೇಕು. ಶಾಂತಿ- ಸುವ್ಯವಸ್ಥೆ ತರುವ ಕೆಲಸವನ್ನು ನಮ್ಮ ಸರ್ಕಾರ ಖಂಡಿತವಾಗಿ ಮಾಡಲಿದೆ ಎಂದು ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಹಿಂದೆ ನೀವು ಮುಖ್ಯಮಂತ್ರಿಗಳಿದ್ದಾಗ ಈ ತರಹದ ಸಮಸ್ಯೆಗಳಾಗುತ್ತಿರಲಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ತರಹ ಏನಿಲ್ಲ. ಈಗಿನ ಸಿಎಂ ಕೂಡ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.