ADVERTISEMENT

ಸರ್ಕಾರದ್ದು ರೈತ ವಿರೋಧಿ ಮನಸ್ಥಿತಿ: ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2023, 15:18 IST
Last Updated 6 ಸೆಪ್ಟೆಂಬರ್ 2023, 15:18 IST
<div class="paragraphs"><p>ಬಸವರಾಜ ಬೊಮ್ಮಾಯಿ</p></div>

ಬಸವರಾಜ ಬೊಮ್ಮಾಯಿ

   

ಬೆಂಗಳೂರು: 'ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ಹೆಚ್ಚಿಗೆ ಮಾಡಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂಬುದಾಗಿ ಸಚಿವ ಶಿವಾನಂದ ಪಾಟೀಲ ಹೇಳಿರುವುದು ರೈತ ವಿರೋಧಿ ಮನಸ್ಥಿತಿ ತೋರಿಸುತ್ತದೆ' ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಅವರು, 'ಯಾರೇ ತೀರಿಕೊಂಡರೂ ಎಲ್ಲ ಆಯಾಮಗಳಿಂದ ಪರಿಶೀಲನೆ ಮಾಡಿದ ನಂತರವೇ ಹಣ ಬಿಡುಗಡೆ ಆಗುತ್ತದೆ. ಹಣಕ್ಕಾಗಿಯೇ ರೈತರು ಸಾಯುತ್ತಾರೆ ಎಂಬುದು ಸರಿಯಲ್ಲ' ಎಂದರು.

ADVERTISEMENT

‘ರಾಜ್ಯದಲ್ಲಿ ಮೂರು ತಿಂಗಳಲ್ಲಿ 172 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಡಲೇ ಅವರಿಗೆ ಪರಿಹಾರ ಕೊಡಬೇಕು. ಕೃಷಿ ಇಲಾಖೆ ರೈತರಿಗೆ ಕೌನ್ಸಿಲಿಂಗ್ ಮಾಡಬೇಕು. ರೈತ ದುಡ್ಡಿಗಾಗಿಯೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ ಎನ್ನುವುದು ಅಮಾನವೀಯ. ಯಾರೂ ಕೂಡ ದುಡ್ಡಿಗಾಗಿ ತಮ್ಮ ಜೀವ ತ್ಯಾಗ ಮಾಡುವುದಿಲ್ಲ’ ಎಂದರು.

ಕ್ಷಮೆ ಕೇಳಲು ವಿಜಯೇಂದ್ರ ಆಗ್ರಹ:

‘ರೈತರು ಪರಿಹಾರದ ಆಸೆಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಶಿವಾನಂದ ಪಾಟೀಲ ಹೇಳಿದ್ದಾರೆ. ಆ ಸಚಿವರಿಗೆ ಅಧಿಕಾರದ ಮದ ಏರಿದೆ. ಅವರು ರೈತರ ಕ್ಷಮೆ ಕೇಳಬೇಕು’ ಎಂದು ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

‘ಸಚಿವರು ಬರ ಪರಿಸ್ಥಿತಿಯನ್ನು ಹಗುರವಾಗಿ ತಗೊಂಡಿದ್ದಾರೆ. ಮಳೆ ಕೊರತೆ, ವಿದ್ಯುತ್ ಅಭಾವದಿಂದ ರೈತರು ಪರದಾಡುತ್ತಿದ್ದಾರೆ. 196 ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರದ ವಾತಾವರಣವಿದೆ. ಮಾಧ್ಯಮಗಳು ಈ ಕುರಿತು ನಿರಂತರವಾಗಿ ಬರೆಯುತ್ತಿದ್ದರೂ ಸರ್ಕಾರ ಮಲಗಿದೆ’ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.