ADVERTISEMENT

ಮಾಜಿ ಶಾಸಕ ರಾಜಣ್ಣ ಮಾಮನಿ ನಿಧನ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2018, 17:06 IST
Last Updated 5 ಅಕ್ಟೋಬರ್ 2018, 17:06 IST
ರಾಜಣ್ಣ
ರಾಜಣ್ಣ   

ಸವದತ್ತಿ (ಬೆಳಗಾವಿ ಜಿಲ್ಲೆ): ಸವದತ್ತಿ– ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರಾಜಣ್ಣ (ವಿಶ್ವನಾಥ) ಕರಬಸಪ್ಪ ಮಾಮನಿ (58) ಶುಕ್ರವಾರ ಬೆಳಿಗ್ಗೆ ನಿಧನರಾದರು.

ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಮೃತರು, ಹಾಲಿ ಶಾಸಕ ಆನಂದ ಮಾಮನಿ ಅವರ ಸೋದರ ಸಂಬಂಧಿ.

2004ರಲ್ಲಿ ಪಕ್ಷೇತರ ಅಭ್ಯರ್ಥಿ ಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಅವರು, ಆಗಿನ ಕಾಂಗ್ರೆಸ್‌– ಜೆಡಿಎಸ್‌ನ ಸಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದರು. ಇಲ್ಲಿನ ಕೃಷಿ ಮಾರುಕಟ್ಟೆ ಹಮಾಲರಿಗಾಗಿ ಪ್ರತ್ಯೇಕ ಕಾಲೊನಿ ನಿರ್ಮಿಸಿಕೊಡುವ ಕೆಲಸ ಮಾಡಿದ್ದರು. ಯಡಿಯೂರಪ್ಪ ನೇತೃತ್ವದ ಕೆಜೆಪಿ ಸೇರಿದ್ದರು. ಮೃತರ ಅಂತ್ಯಕ್ರಿಯೆ ಸಂಜೆ ನಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.