ADVERTISEMENT

ಮಾಜಿ ಶಾಸಕ ಶ್ರೀಶೈಲ ಬಿದರೂರು ನಿಧನ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2022, 8:44 IST
Last Updated 25 ನವೆಂಬರ್ 2022, 8:44 IST
   

ಬೆಂಗಳೂರು: ನಗರದ ವರ್ತೂರಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲ ಬಿದರೂರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಟಿಕೆಟ್‌ ಕೋರಿ ಅರ್ಜಿ ಸಲ್ಲಿಸಿದ್ದ ಶ್ರೀಶೈಲ ಅವರೂ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ಆರಂಭದಲ್ಲೇ ವಾಂತಿ ಮಾಡಿಕೊಂಡ ಅವರು ಕುಸಿದುಬಿದ್ದರು. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೃದಯಾಘಾತಕ್ಕೊಳಗಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಆರಂಭಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಬಿಜೆಪಿಯಿಂದ ರೋಣ ಮತ್ತು ಗದಗ ಕ್ಷೇತ್ರಗಳಿಂದ ತಲಾ ಒಂದು ಬಾರಿ ಶಾಸಕರಾಗಿದ್ದ ಶ್ರೀಶೈಲ ಅವರಿಗೆ 2018ರ ವಿಧಾನಸಭಾ ಚುನಾವಣೆಯಲ್ಲಿ ಆ ಪಕ್ಷ ಟಿಕೆಟ್‌ ನೀಡಿರಲಿಲ್ಲ. 2019ರಲ್ಲಿ ಅವರು ಕಾಂಗ್ರೆಸ್‌ ಸೇರಿದ್ದರು. ಈ ಬಾರಿ ಗದಗ ಮತ್ತು ರೋಣ ಕ್ಷೇತ್ರಗಳಲ್ಲಿ ಟಿಕೆಟ್ ಕೋರಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದರು. ಶ್ರೀಶೈಲ ಅವರಿಗೆ 60 ವರ್ಷ ವಯಸ್ಸಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.