ಚಾಮರಾಜನಗರ: ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರ ಅಂತ್ಯಕ್ರಿಯೆ ಭಾನುವಾರ ಅವರ ಹುಟ್ಟೂರು ತಾಲ್ಲೂಕಿನ ಹೆಗ್ಗವಾಡಿಯಲ್ಲಿ ನಡೆಯಲಿದೆ.
ಮೈಸೂರಿನ ಅವರ ಮನೆ, ಕಾಂಗ್ರೆಸ್ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ಅಲ್ಲಿಂದ ಮೃತದೇಹವನ್ನು ನಂಜನಗೂಡಿಗೆ ತಂದು, ರಾತ್ರಿ ಹುಟ್ಟೂರಿಗೆ ತರಲಾಗುವುದು.
ನಂಜನಗೂಡಿಂದ ಮೃತದೇಹವನ್ನು ಚಾಮರಾಜನಗರಕ್ಕೂ ತರಲಾಗುವುದು. ಆ ಬಳಿಕ ಅಲ್ಲಿಂದ ಹುಟ್ಟೂರು ಹೆಗ್ಗವಾಡಿಗೆ ತೆಗೆದುಕೊಂಡು ಹೋಗಲಾಗುವುದು.
ಹೆಗ್ಗವಾಡಿಯಲ್ಲಿರುವ ಅವರ ಜಮೀನಿನಲ್ಲಿ, ತಂದೆ ತಾಯಿ ಸಮಾಧಿ ಪಕ್ಕದಲ್ಲಿ, ಅಂತ್ಯಸಂಸ್ಕಾರ ಭಾನುವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ.
ಎಸ್ ಪಿ ಭೇಟಿ: ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ಪದ್ಮಿನಿ ಸಾಹು ಹಾಗೂ ಅಧಿಕಾರಿಗಳು ಹೆಗ್ಗವಾಡಿಗೆ ಭೇಟಿ ನೀಡಿ ಅಂತ್ಯಕ್ರಿಯೆ ಸ್ಥಳ ಪರಿಶೀಲಿಸಿದರು. ಅಂತಿಮ ದರ್ಶನಕ್ಕೆ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಗ್ರಾಮಸ್ಥರು ಹಾಗೂ ಅಧಿಕಾರಿಗಳಿಗೆ ಸೂಚಿಸಿದರು.
ಇವನ್ನೂ ಓದಿ:
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.