ADVERTISEMENT

ನಿಗಮ–ಮಂಡಳಿಗಳ ಪರೀಕ್ಷೆ ಫಲಿತಾಂಶ ಪ್ರಕಟ 

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2024, 22:30 IST
Last Updated 7 ಮಾರ್ಚ್ 2024, 22:30 IST
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ   

ಬೆಂಗಳೂರು: ಕಿಯೋನಿಕ್ಸ್‌ ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಡೆದಿದ್ದ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್‌ ಇಂಟರ್‌ನ್ಯಾಶನಲ್‌ ಲಿಮಿಟೆಡ್‌, ಕರ್ನಾಟಕ ಆಹಾರ‌ ಮತ್ತು ನಾಗರಿಕ ಸರಬರಾಜು ನಿಗಮಗಳ 670 ಖಾಲಿ ಹುದ್ದೆಗಳಿಗೆ‌ ಅ.28ರಿಂದ ನ.25ರವರಗೆ ಪರೀಕ್ಷೆಗಳನ್ನು ನಡೆಸಲಾಗಿತ್ತು. 8 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆ ಬರೆದಿದ್ದ ಎಲ್ಲರ ಅಂಕಗಳನ್ನೂ ಪ್ರಕಟಿಸಲಾಗಿದೆ.

ಅಭ್ಯರ್ಥಿಗಳು ಕೆಇಎ ಜಾಲತಾಣ http://kea.kar.nic.in ಲಿಂಕ್‌ ಮೂಲಕ ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ ಫಲಿತಾಂಶದ ವಿವರಗಳನ್ನು ಪಡೆಯಬಹುದು. ಫಲಿತಾಂಶ ಸಿಗದವರು ಅದೇ ಲಿಂಕ್‌ನಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಾಧಿಕಾರ ಹೇಳಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.