
ಪ್ರಜಾವಾಣಿ ವಾರ್ತೆ
ಲೋಕಾಯುಕ್ತ
ಪ್ರಜಾವಾಣಿ ಚಿತ್ರ
ಬೆಂಗಳೂರು: ಅಬಕಾರಿ ಇಲಾಖೆಯ ಉಪ ಆಯುಕ್ತ ಜಗದೀಶ್ ನಾಯಕ್ ₹ 25 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಇಲ್ಲಿನ ಕೇಂದ್ರ ಕಚೇರಿಯಲ್ಲಿ ಜಗದೀಶ್ ನಾಯಕ್ ಅವರನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ಹೇಳಿದ್ದಾರೆ.
ಜಗದೀಶ್ ನಾಯಕ್ ವ್ಯಕ್ತಿಯೊಬ್ಬರ ಕೆಲಸ ಮಾಡಿಕೊಡಲು ₹ 80 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ₹ 25 ಲಕ್ಷ ಪಡೆಯುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.