ADVERTISEMENT

ಹುಣಸೋಡು ಸ್ಫೋಟ: ವಿವರ ಕೇಳಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2021, 17:25 IST
Last Updated 2 ಫೆಬ್ರುವರಿ 2021, 17:25 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು:ಐವರು ಪ್ರಾಣ ಕಳೆದುಕೊಂಡ ಶಿವಮೊಗ್ಗ ಜಿಲ್ಲೆಯ ಹುಣಸೋಡು ಸ್ಫೋಟ ಪ್ರಕರಣಕ್ಕೆ ಕಾರಣವಾದ ವ್ಯಕ್ತಿಗಳ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ವಿವರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ವಕೀಲ ಎಂ.ಕೆ. ವಿಜಯಕುಮಾರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಸರ್ಕಾರ, ಸ್ಫೋಟಕಗಳ ಮುಖ್ಯ ನಿಯಂತ್ರಕ, ನಾಗ್ಪುರ ಮತ್ತು ಶಿವಮೊಗ್ಗ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗೆ ನೋಟಿಸ್ ನೀಡಲು ಆದೇಶಿಸಿದೆ. ಮುಂದಿನ ವಿಚಾರಣೆಯನ್ನು ಫೆ. 26ಕ್ಕೆ ಮುಂದೂಡಿತು.

‘ನಿರ್ಲಕ್ಷ್ಯಕ್ಕಾಗಿ ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಹಾನಿ ವ್ಯಾಪ್ತಿ ಗುರುತಿಸಬೇಕು, ಪ್ರಾಣ ಕಳೆದುಕೊಂಡ ವ್ಯಕ್ತಿಗಳ ಕುಟುಂಬಕ್ಕೆ ಪರಿಹಾರ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.