ADVERTISEMENT

ಸ್ಫೋಟಕ ಬಳಕೆಗೆ ಮಾರ್ಗಸೂಚಿ ಇಂದು: ಗೃಹ ಸಚಿವ

​ಪ್ರಜಾವಾಣಿ ವಾರ್ತೆ
Published 24 ಜನವರಿ 2021, 17:22 IST
Last Updated 24 ಜನವರಿ 2021, 17:22 IST
ಜಿಲೆಟಿನ್‌ಗಳು
ಜಿಲೆಟಿನ್‌ಗಳು    

ಬೆಂಗಳೂರು:ಗೃಹ ಇಲಾಖೆ ವ್ಯಾಪ್ತಿಗೆ ಅನ್ವಯ ಆಗುವಂತೆ ರಾಜ್ಯದಲ್ಲಿ ಸ್ಫೋಟಕಗಳ ಬಳಕೆಗೆ ಸೋಮವಾರ ಮಾರ್ಗಸೂಚಿ ಪ್ರಕಟಿಸಲಾಗು ವುದು’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಈ ಕುರಿತು ಸ್ಫೋಟಕ ಬಳಕೆಗೆ ಪರವಾನಗಿ ಪಡೆದವರು ಮತ್ತು ಅಧಿಕಾರಿಗಳ ಜತೆ ಚರ್ಚಿಸುತ್ತೇನೆ. ಈಗಾಗಲೇ ಇರುವ ಮಾರ್ಗಸೂಚಿಗಳನ್ನು ನೋಡಿಕೊಂಡು ಹೊಸ ಮಾರ್ಗಸೂಚಿಗಳನ್ನು ರೂಪಿಸಲಾಗುವುದು’ ಎಂದರು.

‘ಅನಧಿಕೃತವಾಗಿ ಜಿಲೆಟಿನ್ ಸಂಗ್ರಹ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಿವಮೊಗ್ಗ ಬಳಿ ಡೈನಮೈಟ್‌ ಸ್ಫೋಟ ಪ್ರಕರಣದ ಬಗ್ಗೆ ಫೊರೆನ್ಸಿಕ್ ತಂಡ, ಬಾಂಬ್ ಸ್ಕ್ವಾಡ್‌, ಶ್ವಾನದಳದಿಂದ ಜಂಟಿ ಕಾರ್ಯಾಚರಣೆ ನಡೆಯುತ್ತಿದೆ. ಅವುಗಳ ವರದಿ ಆಧಾರದಲ್ಲಿ ಮುಂದಿನ ತನಿಖೆ ಕೈಗೊಳ್ಳಲಾಗುವುದು’ ಎಂದೂ ಬೊಮ್ಮಾಯಿ ವಿವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.