ADVERTISEMENT

ಕೆಎಎಸ್‌ | ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಿ: ಮನವಿ

​ಪ್ರಜಾವಾಣಿ ವಾರ್ತೆ
Published 2 ಮೇ 2024, 16:10 IST
Last Updated 2 ಮೇ 2024, 16:10 IST
 ಪರೀಕ್ಷೆ 
ಪರೀಕ್ಷೆ    

ಬೆಂಗಳೂರು: 384 ಗೆಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಬೇಕು ಎಂದು ಮೈಸೂರು ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪಿ.ವಿ. ನಾಗರಾಜ ಮನವಿ ಮಾಡಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗವು ಈಚೆಗೆ ಗ್ರೂಪ್‌ ಎ ವೃಂದದ 159 ಹಾಗೂ ಗ್ರೂಪ್‌ ಬಿ ವೃಂದದ 225 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿತ್ತು. ಅರ್ಜಿ ಸಲ್ಲಿಸಲು ಮೇ 15ರವರೆಗೆ ಅವಕಾಶ ನೀಡಲಾಗಿದೆ. ಜೂನ್‌ 21ಕ್ಕೆ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಆದರೆ, ಚುನಾವಣಾ ಸಮಯವಾದ ಕಾರಣ ಗ್ರಾಮೀಣ ಪ್ರದೇಶದ ಬಹುತೇಕ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಸಾಕಷ್ಟು ಪದವೀಧರರು ಉದ್ಯೋಗ ನಿರೀಕ್ಷೆಯಲ್ಲಿ ಇದ್ದಾರೆ. ಸರ್ವರ್‌ ಮತ್ತಿತರ ತಾಂತ್ರಿಕ ಸಮಸ್ಯೆಗಳಿಂದಾಗಿ ಅರ್ಜಿ ಸಲ್ಲಿಕೆ ಸಾಧ್ಯವಾಗಿಲ್ಲ ಎಂದು ಸಮಸ್ಯೆ ತೆರೆದಿಟ್ಟಿದ್ದಾರೆ.

ದೃಷ್ಟಿದೋಷ ಸೇರಿದಂತೆ ವಿವಿಧ ನ್ಯೂನತೆ ಇರುವ ಅಂಕವಿಕಲ ಅಭ್ಯರ್ಥಿಗಳಿಗೂ ಸಾಕಷ್ಟು ತೊಂದರೆಯಾಗಿದೆ. ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಿದರೆ ಗ್ರಾಮೀಣ ಯುವಕ-ಯುವತಿಯರಿಗೆ ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ. ಹಾಗಾಗಿ, ಅವಧಿ ವಿಸ್ತರಿಸಬೇಕು ಹಾಗೂ ಪೂರ್ವಭಾವಿ ಪರೀಕ್ಷೆಯ ದಿನಾಂಕ ಮುಂದೂಡಬೇಕು ಎಂದು ಕೋರಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.