ADVERTISEMENT

ವಾಹನ ತೆರಿಗೆ ಪಾವತಿಸಲು ಕಾಲಾವಕಾಶ ವಿಸ್ತರಣೆ: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2020, 12:18 IST
Last Updated 2 ಏಪ್ರಿಲ್ 2020, 12:18 IST
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ   

ಬೆಂಗಳೂರು: ಕೋವಿಡ್ - 19ರ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವನ್ನು ಸಂಪೂರ್ಣವಾಗಿ ಲಾಕ್‌ಡೌನ್ ಮಾಡಿರುವುದರಿಂದ, ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ಜೂನ್ 1ರವರೆಗೆ ವಿಸ್ತರಿಸಿ ಆದೇಶಿಸಿದೆ.

ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 4(1)ರ ನಿಯಮಗಳನ್ನು ಸಡಿಲಗೊಳಿಸಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿದೆ. ಹೀಗಾಗಿ ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ಏಪ್ರಿಲ್ 04 ರಿಂದ ಮೇ 5ರೊಳಗಾಗಿ ಪಾವತಿಸಬೇಕಿದ್ದ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ಜೂನ್ 1ರವರೆಗೆ ವಿಸ್ತರಿಸಿ ಆದೇಶಿಸಿದೆ.

ವಾಹನ ಮಾಲೀಕರು ಇದನ್ನು ಸದುಪಯೋಗ ಪಡಿಸಿಕೊಂಡು ಲಾಕ್‌ಡೌನ್ ಅನ್ನು ಯಶಸ್ವಿಗೊಳಿಸುವ ಮೂಲಕ ಕೊರೊನಾ ಪಿಡುಗನ್ನು ತಡೆಗಟ್ಟುವ ಸರ್ಕಾರದ ಪ್ರಯತ್ನಕ್ಕೆ ಸಹಕರಿಸಬೇಕೆಂದು ನಾನು ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.